

ವಿಜಯವಾಣಿ ಸುದ್ದಿಜಾಲ ಆರ್ಡಿ
ಮನುಷ್ಯ ಮದ್ಯಪಾನ ಸೇರಿದಂತೆ ಇನ್ನಿತರ ದುಶ್ಚಟಗಳಿಗೆ ಬಲಿಯಾಗಿ ಜೀವನದ ಉತ್ತಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವುದು ದುರದೃಷ್ಟಕರ. ಮದ್ಯವರ್ಜನ ಶಿಬಿರ ಮದ್ಯವ್ಯಸನಿಗಳಿಗೆ ದುಶ್ಚಟದಿಂದ ಮುಕ್ತಿ ನೀಡಿ ನವಜೀವನ ರೂಪಿಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆ ಉಪನಿರೀಕ್ಷಕ ನಾಸೀರ್ ಹುಸೇನ್ ಹೇಳಿದರು.
ಆರ್ಡಿ ಚಿತ್ತೇರಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆರ್ಡಿ-ಬೆಳ್ವೆ ವಲಯ, ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ 1869ನೇ ಮದ್ಯವರ್ಜನ ಶಿಬಿರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.
ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಆರ್ಡಿ ಅಧ್ಯಕ್ಷ ಸುರೇಶ ಶೆಟ್ಟಿ ಆರ್ಡಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಆರ್.ನವೀನ್ಚಂದ್ರ ಶೆಟ್ಟಿ ರಟ್ಟಾಡಿ, ಹೆಬ್ರಿ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಉಡುಪಿ ಪ್ರಾದೇಶಿಕ ಕಚೇರಿ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಹೆಬ್ರಿ ತಾಲೂಕು ಕೇಂದ್ರ ಸಮಿತಿ ಅಧ್ಯಕ್ಷ ಪ್ರವೀಣ ಹೆಗ್ಡೆ, ಬೆಳ್ವೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ ಬೆಳ್ವೆ, ಕುಂದಾಪುರ ವಿಭಾಗ ಲೋಕೋಪಯೋಗಿ ಇಲಾಖೆ ಅಭಿಯಂತ ಮಹಾಬಲ ನಾಯ್ಕ ಅಲ್ಬಾಡಿ, ಉಡುಪಿ ವಿಶ್ವ ಹಿಂದು ಪರಿಷತ್ ಉಪಾಧ್ಯಕ್ಷ ವೈ.ವಿಜಯಕುಮಾರ್ ಶೆಟ್ಟಿ ಗೋಳಿಯಂಗಡಿ, ಬೆಳ್ವೆ ವಲಯ ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟಗಳ ಅಧ್ಯಕ್ಷ ಕೃಷ್ಣ ಪುತ್ರನ್ ಆರ್ಡಿ, ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ್ಗೋಳಿ, ಬೆಳ್ವೆ ಉದ್ಯಮಿ ಬಿ.ರಾಜೇಂದ್ರ ಕಿಣಿ ಬೆಳ್ವೆ, ಜನಜಾಗೃತಿ ವೇದಿಕೆ ಸದಸ್ಯ ಬಿ.ಶಂಕರ ಶೆಟ್ಟಿ ಬೆಳ್ವೆ, ವೈ.ಪಟ್ಟಾಭಿರಾಮ್ ಭಟ್ ಮರೂರು, ಸುಧಾಕರ ಶೆಟ್ಟಿ ಅರಸಮ್ಮಕಾನು, ಸುದರ್ಶನ ಶೆಟ್ಟಿ ಆರ್ಡಿ, ಶ್ರೀಮಂಜುನಾಥೇಶ್ವರ ಭಜನಾ ಪರಿಷತ್ ಹೆಬ್ರಿ ತಾಲೂಕು ಅಧ್ಯಕ್ಷ ಗೋಪಾಲ ಕುಲಾಲ್, ಶಿಬಿರಾಧಿಕಾರಿ ವಿದ್ಯಾಧರ, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಎ.ಜಿ., ಆರೋಗ್ಯ ಇಲಾಖೆ ಜಯಲಕ್ಷ್ಮೀ, ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ಹೆಬ್ರಿ ತಾಲೂಕು ಯೋಜನಾಧಿಕಾರಿ ಲೀಲಾವತಿ ಉಪಸ್ಥಿತರಿದ್ದರು.
ಲೀಲಾವತಿ ಸ್ವಾಗತಿಸಿದರು. ಮಂಜುನಾಥ ಮರೂರು ಪ್ರಾರ್ಥಿಸಿದರು. ಗಣೇಶ್ ಆಚಾರ್ಯ ಪ್ರಾಸ್ತಾವಿಕ ಮಾತನಾಡಿದರು. ಕೃಷಿ ಅಧಿಕಾರಿ ಉಮೇಶ್ ಬಿ.ಕೆ., ಬೆಳ್ವೆ ವಲಯ ಮೇಲ್ವಿಚಾರಕ ರಾಘವೇಂದ್ರ ಗೌಡ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಪ್ರಶಾಂತ ಗುಮ್ಮೋಲ ವಂದಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರು ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಸ್ವಾಲಂಬನೆಯ ಜೀವನಕ್ಕಾಗಿ ಮಹತ್ವದ ಯೋಜನೆ ರೂಪಿಸಿದ್ದಾರೆ. ಮದ್ಯವರ್ಜನ ಶಿಬಿರ, ಮಹಿಳಾ ಸಬಲೀಕರಣ, ಕಾರ್ಮಿಕರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ಅನುಷ್ಠಾನಗೊಳಿಸಿ ಸಮಾಜದ ಏಳಿಗೆಗೆ ಕಾರಣರಾಗಿದ್ದಾರೆ. -ಸುರೇಶ ಶೆಟ್ಟಿ ಆರ್ಡಿ, ಅಧ್ಯಕ್ಷರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆರ್ಡಿ
-ಸುರೇಶ ಶೆಟ್ಟಿ ಆರ್ಡಿ, ಅಧ್ಯಕ್ಷರು, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಆರ್ಡಿ