ವಿದ್ಯಾರ್ಥಿಗಳಿಗೆ ಪ್ರಾಪಂಚಿಕ ಜ್ಞಾನ ಅಗತ್ಯ...

Prerana 1
Published on

ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅನಿಸಿಕೆ

ಪ್ರೇರಣಾ ಕಾರ್ಯಕ್ರಮ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ವಿದ್ಯಾರ್ಥಿಗಳ ಆಂತರ್ಯ ಶಕ್ತಿ ಉದ್ದೀಪನಗೊಳಿಸುವುದೇ ನಿಜವಾದ ಶಿಕ್ಷಣ. ಅಂತಹ ಪರಿಪೂರ್ಣ ಶಿಕ್ಷಣ ಕೇವಲ ತರಗತಿಯ ನಾಲ್ಕು ಗೋಡೆಯೊಳಗೆ ಲಭಿಸದು. ವಿದ್ಯಾರ್ಥಿಗಳಿಗೆ ಪ್ರಪಂಚದ ವಾಸ್ತವಿಕ ಅರಿವು ಮೂಡುವಂತಾಗಲು ಪಠ್ಯೇತರ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರಣೆ ನೀಡಬೇಕಾದ ಅಗತ್ಯತೆ ಇದೆ ಎಂದು ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಅನಿಸಿಕೆ ವ್ಯಕ್ತಪಡಿಸಿದರು.

ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜುಲೈ 23ರಂದು ಆಯೋಜಿಸಿದ್ದ ಪ್ರೇರಣಾ ಕಾರ್ಯಕ್ರಮ ಉದ್ಘಾಟಿಸಿ, ದಿಕ್ಸೂಚಿ ಉಪನ್ಯಾಸ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗಣಕ ವಿಭಾಗದ ಹಿರಿಯ ಉಪನ್ಯಾಸಕ ಗಿರಿರಾಜ ಭಟ್ಟ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲ ಡಾ.ಚೇತನಕುಮಾರ್​ ಶೆಟ್ಟಿ ಸ್ವಾಗತಿಸಿದರು. ಆಡಳಿತ ವಿಭಾಗದ ಡೀನ್​ ರಕ್ಷಿತ್​ ರಾವ್​ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಸತೀಶ ಶೆಟ್ಟಿ ಅತಿಥಿ ಪರಿಚಯ ಮಾಡಿದರು. ಕಾಲೇಜಿನ ಐಕ್ಯುಎಸಿ ಸಂಯೋಜಕಿ ದೀಪಿಕಾ ಜಿ. ವಂದಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಮಕ್ಕಳಲ್ಲಿರುವ ಕೌಶಲ ಅನಾವರಣದ ಜವಾಬ್ದಾರಿ ಶಿಕ್ಷಕರಿಗೂ ಹೆತ್ತವರಿಗೂ ಇದೆ. ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಅನುಭವ ಕಲಿಕಾ ಪದ್ಧತಿ ಅಳವಡಿಕೆ ಇಂದಿನ ಅಗತ್ಯತೆಯಾಗಬೇಕಿದೆ. | ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ. ನಿವೃತ್ತ ಪ್ರಾಧ್ಯಾಪಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net