ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮ ನಾಳೆ

Published on

ಕೊಳ್ಳೇಗಾಲ: ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಯ ಆವರಣದಲ್ಲಿ ಮಾ.5 ರಂದು ಬೆಳಗ್ಗೆ 10 ಗಂಟೆಗೆ ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಮುಡಿಗುಂಡ ವಿರಕ್ತ ಮಠದ ಶ್ರೀಕಂಠ ಸ್ವಾಮೀಜಿ ವಹಿಸಲಿದ್ದಾರೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶ್ವಚೇತನ ಸಮೂಹ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಪ್ರೇಮಲತಾ ಕೃಷ್ಣಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಚಾಮರಾಜನಗರ ಅಭಿವೃದ್ಧಿ ಹಾಗೂ ಡಯಟ್ ಪ್ರಾಂಶುಪಾಲ ಕಾಶಿನಾಥ್. ಬಿಇಒ ಮಂಜುಳಾ, ಸಮನ್ವಯಾಧಿಕಾರಿ ಮಹದೇವಕುಮಾರ್ ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರಿನ ಡಿವೈಎಸ್ಪಿ ಎಚ್.ಕೆ.ಮಹಾನಂದ್, ಬೆಂಗಳೂರಿನ ಪ್ರೇರಣಾ ಅಸೋಸಿಯೇಟ್ಸ್ ಸಂಸ್ಥೆ ವೆಂಕಟೇಗೌಡ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net