ಮರಕ್ಕೆ ಡಿಕ್ಕಿ ಹೊಡೆದು ವಾಹನ ಸವಾರ ಸಾವು

Bike Accident
Published on

ಬೆಂಗಳೂರು: ದ್ವಿಚಕ್ರ ವಾಹನ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತ್ರಿಪುರ ಮೂಲದ ಪಿಜು ಉರಾಂಗ್ (೨೫) ಎಂಬ ಯುವಕ ಮೃತಪಟ್ಟಿದ್ದಾನೆ.
ಸಿ.ವಿ.ರಾಮನ್ ರಸ್ತೆಯ ಮತ್ತಿಕೆರೆ ಕ್ರಾಸ್ ಬಳಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.
ಮಲ್ಲೇಶ್ವರದ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಪಿಜು ಉರಾಂಗ್, ಸಂಬಂಧಿಕರೊಬ್ಬರನ್ನು ಯಶವಂತಪುರ ರೈಲು ನಿಲ್ದಾಣಕ್ಕೆ ಬಿಟ್ಟು ವಾಪಸ್ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಜಾಗರೂಕತೆಯಿಂದ ತುಂಬಾ ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಪಿಜು ಉರಾಂಗ್, ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗದಲ್ಲಿನ ಮರಕ್ಕೆ ವಾಹನ ಗುದ್ದಿಸಿದ್ದಾನೆ. ಘಟನೆಯಲ್ಲಿ ತಲೆಗೆ ತೀವ್ರ ಪೆಟ್ಟಾದ ಕಾರಣ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದ್ವಿಚಕ್ರ ಸವಾರಿ ಮಾಡುವಾಗ ಪಿಜು ಉರಾಂಗ್, ಹೆಲ್ಮೆಟ್ ಧರಿಸಿರಲಿಲ್ಲ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net