ಆಟೋಟ ಸ್ಪರ್ಧೆಯಲ್ಲಿ ಮಿಂದೆದ್ದ ವಾಹನ ಚಾಲಕರು

17SPT04
Published on

ಸೋಮವಾರಪೇಟೆ: ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ವತಿಯಿಂದ ಆಯುಧ ಪೂಜೆ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಇತ್ತೀಚೆಗೆ ಸಂಘದ ಸದಸ್ಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.


ಕಾರ್ಯಕ್ರಮವನ್ನು ಚೌಡ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ ಉದ್ಘಾಟಿಸಿದರು.
ನತೀಶ್ ಮಂದಣ್ಣ ಮಾತನಾಡಿ, ವರ್ಷವಿಡೀ ವಾಹನ ಚಾಲನೆ ಮಾಡುತ್ತಿರುವ ಚಾಲಕರಿಗೆ ಒಂದು ದಿನ ಆಟೋಟ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಸಂಘ ಮಾಡಿಕೊಡುತ್ತಿರುವುದು ಶ್ಲಾಘನೀಯ. ಕ್ರೀಡೆ ದೈಹಿಕ ಹಾಗೂ ಮಾನಸಿಕವಾಗಿ ನಮ್ಮನ್ನು ಸದೃಢಗೊಳಿಸುತ್ತದೆ. ಪ್ರತಿದಿನ ಒಂದು ಗಂಟೆಯನ್ನಾದರೂ ಎಲ್ಲರೂ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಳ್ಳಬೇಕು ಎಂದರು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಜಿ.ಸುರೇಶ್ ವಹಿಸಿದ್ದರು. ಉದ್ಯಮಿ ಎ.ಪಿ.ವೀರರಾಜು, ಟಿ.ಕೆ.ರಮೇಶ್, ಗುತ್ತಿಗೆದಾರ ಗಂಧರ್ವ, ದಾನಿಗಳಾದ ಮಸಗೋಡು ದೇವರಾಜು, ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಹಾಗೂ ಪದಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net