

ನಾಪೋಕ್ಲು: ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಹಿರಿಯ ವಕೀಲೆ ಕೆ.ಎಂ.ಮೀನಾಕುಮಾರಿ ಮಾತನಾಡಿ, ಮಹಿಳೆಯರಿಗೆ ಲಭ್ಯವಿರುವ ಕಾನೂನು ಹಕ್ಕುಗಳ ಕುರಿತು ವಿವರಿಸಿದರು.
ವಿಶೇಷವಾಗಿ ಮಹಿಳಾ ಸುರಕ್ಷತೆ, ಆಸ್ತಿಯಹಕ್ಕು, ಶಿಕ್ಷಣಹಕ್ಕು, ಕೆಲಸದ ಸ್ಥಳದಲ್ಲಿ ಲೈಂಗಿಕ ಶೋಷಣೆಗೆ ವಿರುದ್ಧದ ಕಾನೂನು, ಕೌಟುಂಬಿಕ ಹಿಂಸೆ ತಡೆ ಕಾಯ್ದೆ ಹಾಗೂ ಮಹಿಳೆಯರು ತಮ್ಮ ಹಕ್ಕುಗಳನ್ನು ಅರಿತು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಮುಂದುವರಿಯಬೇಕೆಂಬ ಸಂದೇಶವನ್ನು ನೀಡಿದರು.
ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ. ಚೌರಿರ ಜಗತ್ ತಿಮ್ಮಯ್ಯ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣುಅಪ್ಪಣ್ಣ, ಕಾಲೇಜಿನ ಪ್ರಾಂಶುಪಾಲ ಕೆ.ಎಸ್.ವಿಲ್ಮಾ , ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.