ಗಾಂಧಿಬಜಾರ್ ಸಂತೆ ಸ್ಥಳಾಂತರಿಸಿ

chenni
ಎಸ್.ಎನ್.ಚನ್ನಬಸಪ್ಪ ಪಾಲಿಕೆ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಆಯುಕ್ತೆ ಡಾ.ಕವಿತಾ ಯೋಗಪ್ಪನವರ್ ಹಾಗೂ ಅಧಿಕಾರಿಗಳು ಸಭೆಯಲ್ಲಿದ್ದರು.
Published on

ಶಿವಮೊಗ್ಗ: ನಗರದ ಗಾಂಧಿ ಬಜಾರ್‌ನಲ್ಲಿ ಪ್ರತಿ ಮಂಗಳವಾರ ನಡೆಯುವ ಸಂತೆಯನ್ನು ಕೆಎಸ್‌ಆರ್‌ಟಿಸಿ ಡಿಪೋ ಬಳಿಯ ಸಂತೆ ಮೈದಾನಕ್ಕೆ ಸ್ಥಳಾಂತರಿಸುವಂತೆ ಶಾಸಕ ಎಸ್.ಎನ್.ಚನ್ನಬಸಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಪಾಲಿಕೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ಗಾಂಧಿ ಬಜಾರ್‌ನಲ್ಲಿ ಸಂತೆ ನಡೆಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ವ್ಯಾಪಾರಿಗಳಿಗೂ ಅಲ್ಲಿ ಮೂಲ ಸೌಕರ್ಯ ಒದಗಿಸುವುದು ಸಾಧ್ಯವಿಲ್ಲ. ಹೀಗಾಗಿ ವಿಶಾಲವಾಗಿರುವ ಸಂತೆ ಮೈದಾನಕ್ಕೆ ಸ್ಥಳಾಂತರಿಸಬೇಕೆಂದರು.
ನಗರದಲ್ಲಿ ಡೆಂೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆಯಿಂದ ಹೆಚ್ಚಿನ ಮುಂಜಾಗ್ರತೆ ಕೈಗೊಳ್ಳಬೇಕು. ಸೊಳ್ಳೆ ನಿಯಂತ್ರಣಕ್ಕೆ ಫಾಗಿಂಗ್ ವ್ಯವಸ್ಥೆ ಮಾಡಬೇಕು. ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸಬೇಕು. ಮಳೆ ಹಾಗೂ ಬಿಸಿಲಿನ ನಡುವೆ ಸೊಳ್ಳೆಗಳ ಉತ್ಪತ್ತಿಯಾಗುತ್ತಿರುವುದು ಡೆಂೆ ಭೀತಿ ಹೆಚ್ಚಿಸಿದೆ. ಇದರ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅತ್ಯವಶ್ಯ. ಪಾಲಿಕೆಯಿಂದ ಎಲ್ಲ ರೀತಿಯ ಕ್ರಮ ಕೈಗೊಂಡು ಸಾರ್ವಜನಿಕರ ಸಹಕಾರವನ್ನೂ ಪಡೆಯಬೇಕೆಂದರು.
ನಗರದ ವಿವಿಧ ಭಾಗಗಳಲ್ಲಿ ಸ್ಮಶಾನ ಭೂಮಿಗೆ ಬೇಡಿಕೆ ಹೆಚ್ಚಿದೆ. ಮುಖ್ಯವಾಗಿ ಗೋಪಾಳ, ಬೊಮ್ಮನಕಟ್ಟೆ, ಗಾಡಿಕೊಪ್ಪ ಹಾಗೂ ಸೋಮಿನಕೊಪ್ಪದಲ್ಲಿ ರುದ್ರಭೂಮಿಗೆ ಜಾಗ ಕೋರಿದ್ದಾರೆ. ಇನ್ನು ಕೆಲವೆಡೆ ಸ್ಮಶಾನ ಜಾಗದ ಅಭಿವೃದ್ಧಿಯ ಬೇಡಿಕೆಯಿದೆ. ಈ ಬಗ್ಗೆ ಪಾಲಿಕೆಯಿಂದ ಗಮನಹರಿಸಬೇಕು. ಸ್ಮಶಾನಗಳನ್ನು ಅಭಿವೃದ್ಧಿಪಡಿಸಬೇಕು ಎಂದರು.
ಎಎ ವೃತ್ತ ಅಂಡರ್‌ಪಾಸ್ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಬೇಕು. ಬೀದಿ ನಾಯಿಗಳಿಂದ ಆಗುತ್ತಿರುವ ತೊಂದರೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಖಾಸಗಿ ಬಸ್ ನಿಲ್ದಾಣದ ಪಕ್ಕವಿರುವ ಹೂವಿನ ಮಾರುಕಟ್ಟೆಯನ್ನು ಶಿವಪ್ಪನಾಯಕ ವೃತ್ತದ ಮಲ್ಟಿಲೆವಲ್ ಪಾರ್ಕಿಂಗ್ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು ತಿಳಿಸಿದರು.
ಪೌರಕಾರ್ಮಿಕರ ಭವನ ಮತ್ತು ಪೌರಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು. ಸವಳಂಗ ರಸ್ತೆಯ ತಂಬಾಕು ಗೋದಾಮನ್ನು ಗೋಶಾಲೆಯಾಗಿ ಬಳಕೆ ಮಾಡಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದರು. ಎಂಆರ್‌ಎಸ್ ವೃತ್ತದಲ್ಲಿ ಯುದ್ಧ ಟ್ಯಾಂಕರ್ ಸ್ಥಾಪನೆ ಸಂಬಂಧ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net