

ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ವಲಯ ಆಗಷ್ಟ್ನಲ್ಲಿ ವಿವಿಧ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ ಪ್ರಾರಂಭಿಸಿದೆ.
ಎಸ್ಎಸ್ಎಸ್ ಹುಬ್ಬಳ್ಳಿ -ಯಶವಂತಪುರ ಒನ್ ವೇ ಸೂಪರ್ಫಾಸ್ಟ್ ಸ್ಪೇಷಲ್ ರೈಲು ಆ. 13ರಂದು ರಾತ್ರಿ 8.20ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಟು, ಮಾರನೇ ದಿನ ಬೆಳಗಿನಜಾವ 4.30ಕ್ಕೆ ಯಶವಂತಪುರ ತಲುಪಲಿದೆ.
ಯಶವಂತಪುರ- ಬೆಳಗಾವಿ - ಯಶವಂತಪುರ ಸೂಪರ್ಫಾಸ್ಟ್ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಆ. 14ರಂದು ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಟು, ಮಾರನೇ ದಿನ ಬೆಳಗಿನಜಾವ 5 ಗಂಟೆಗೆ ಬೆಳಗಾವಿ ತಲುಪಲಿದೆ. ಬೆಳಗಾವಿಯಿಂದ ಆ. 15ರಂದು ಸಂಜೆ 5.30ಕ್ಕೆ ಹೊರಡುವ ಈ ರೈಲು, ಮಾರನೇ ದಿನ ಬೆಳಗಿನಜಾವ 4.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
ಯಶವಂತಪುರ - ಬೆಳಗಾವಿ - ಯಶವಂತಪುರ ಸೂಪರ್ಫಾಸ್ಟ್ ಸ್ಪೇಷಲ್ ಎಕ್ಸ್ಪ್ರೆಸ್ ರೈಲು ಆ. 16ರಂದು ಸಂಜೆ 6.15ಕ್ಕೆ ಯಶವಂತಪುರದಿಂದ ಹೊರಟು, ಮಾರನೇ ದಿನ ಬೆಳಗಿನಜಾವ 5 ಗಂಟೆಗೆ ಬೆಳಗಾವಿ ತಲುಪಲಿದೆ. ಈ ರೈಲು ಮರಳಿ ಆ. 18ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು, ಮಾರನೇ ದಿನ ಬೆಳಗಿನಜಾವ 4.30ಕ್ಕೆ ಯಶವಂತಪುರ ತಲುಪಲಿದೆ.
ಎಸ್ಎಂವಿಟಿ ಬೆಂಗಳೂರು- ಎಸ್ಎಸ್ಎಸ್ ಹುಬ್ಬಳ್ಳಿ ಒನ್ ವೇ ಎಕ್ಸ್ಪ್ರೆಸ್ ಸ್ಪೇಷಲ್ ರೈಲು ಆ. 16ರಂದು ರಾತ್ರಿ 10 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಟು, ಮಾರನೇ ದಿನ ಬೆಳಗ್ಗೆ 7.15ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣ ತಲುಪಲಿದೆ.