

ಹುಬ್ಬಳ್ಳಿ : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕಾಗಿ ನೈಋತ್ಯ ರೈಲ್ವೆ ವಲಯವು ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ಮಧ್ಯೆ ಎರಡು ಹಾಗೂ ಯಶವಂತಪುರ- ವಿಜಯಪುರ ಮಧ್ಯೆ ಒಂದು ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ ಪ್ರಾರಂಭಿಸಿದೆ.
ಏ. 30 ಹಾಗೂ ಮೇ 2ರಂದು ಸಂಜೆ 7 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 7 ಗಂಟೆಗೆ ಬೆಳಗಾವಿ ತಲುಪಲಿದೆ. ಮರಳಿ ಮೇ 1 ಮತ್ತು 3ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಡುವ ರೈಲು, ಮಾರನೇ ದಿನ ಬೆಳಗಿನ ಜಾವ 4.30ಕ್ಕೆ ಎಸ್ಎಂವಿಟಿ ಬೆಂಗಳೂರು ನಿಲ್ದಾಣ ತಲುಪಲಿದೆ.
ಯಶವಂತಪುರದಿಂದ ಏ. 30ರಂದು ರಾತ್ರಿ 10 ಗಂಟೆಗೆ ಹೊರಡುವ ರೈಲು, ಮಾರನೇ ದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ನಿಲ್ದಾಣ ಆಗಮಿಸಲಿದೆ. ಮರಳಿ ವಿಜಯಪುರದಿಂದ ಮೇ 1ರಂದು ಸಂಜೆ 7 ಗಂಟೆಗೆ ಹೊರಡುವ ರೈಲು, ಮಾರನೇ ದಿನ ಬೆಳಗ್ಗೆ 11.15ಕ್ಕೆ ಯಶವಂತಪುರ ತಲುಪಲಿದೆ.