ಕೆರೆಗಳಿಗೆ ನೀರು ಹರಿಸಲು ಯೋಜನೆ ಸಿದ್ಧ ; ಸಂಸದ ಜಿ.ಎಸ್. ಬಸವರಾಜು

21 MDG 1
Published on

ಮಧುಗಿರಿ: ಸಮಗ್ರ ನೀರಾವರಿ ಯೋಜನೆ ಜಾರಿಗೊಳಿಸಿ ಜಿಲ್ಲೆಯ ರೈತರ ಬದುಕನ್ನು ಹಸನುಗೊಳಿಸಲಾಗುತ್ತದೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.

ಕಸಬಾ ಹೋಬಳಿಯ ಚಿನಕವಜ್ರ ಗ್ರಾಮ ಪಂಚಾಯಿತಿ ಕಟ್ಟಡವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ದೇವೆಗೌಡರ ಕುಟುಂಬ ಹಾಗೂ ಹಾಸನ ಜಿಲ್ಲೆಯ ಜೆಡಿಎಸ್ ಶಾಸಕರು ತುಮಕೂರು ಜಿಲ್ಲೆಗೆ ಹೇಮಾವತಿ ನೀರನ್ನು ಹರಿಸುವ ವಿರೋಧದ ನಡುವೆಯೂ ಹೇಮೆ ನೀರನ್ನು ಜಿಲ್ಲೆಗೆ ಹರಿಸುವ ಮೂಲಕ ಜನರ ದಾಹ ತೀರಿಸಲಾಗುವುದು. ಬರಪೀಡಿತ ಪ್ರದೇಶದ ಕೆರೆಗಳಿಗೆ ನೀರು ಹರಿಸಲು ಯೋಜನೆ ಸಿದ್ಧವಾಗಿದ್ದು, ಮುಂದಿನ 2 ವರ್ಷಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಬಜೆಟ್ ಅಧಿವೇಶನ, ಕ್ಯಾಬಿನೇಟ್ ಸಭೆ ಹಾಗೂ ಆರೋಗ್ಯದ ಸಮಸ್ಯೆಯಿಂದ ಕ್ಷೇತ್ರಕ್ಕೆ ಬರಲಾಗಲಿಲ್ಲ, ಆದರೆ ಇದನ್ನು ಕೆಲ ಕಿಡಿಗೇಡಿಗಳು ಅಪಪ್ರಚಾರ ಮಾಡಿ ಉಪಚುನಾವಣೆ ಬರುತ್ತದೆ ಎಂದು ಬಿಂಬಿಸಿದ್ದಾರೆ. ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದರು.

ಮೈದನಹಳ್ಳಿ ಸಮೀಪ ಸೋಲಾರ್ ಪಾರ್ಕ್: ಎತ್ತಿನಹೊಳೆ ಯೋಜನೆಲ್ಲಿ ಕೆನಾಲ್ ಮೂಲಕ ಹೆಚ್ಚುವರಿಯಾಗಿ ಸುವಾರು 15 ಟಿಎಂಸಿ ನೀರು ಜಿಲ್ಲೆಗೆ ಹರಿಸಲು ಸಿಎಂಗೆ ಮನವಿ ವಾಡಲಾಗಿದೆ. ಬರಪೀಡಿತ ತಾಲೂಕಿನಲ್ಲಿ ನಿರುದ್ಯೋಗ ಸಮಸ್ಯೆ ನಿವಾರಿಸಲು ಗಾರ್ಮೆಂಟ್ಸ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ. ಮೈದನಹಳ್ಳಿ ಸಮೀಪ 5 ಸಾವಿರ ಮೆಗಾವಾಟ್ ಸೌರ ವಿದ್ಯುತ್ ಉತ್ಪಾದಿಸಲು ಸೋಲಾರ್ ಪಾರ್ಕ್ ಸ್ಥಾಪನೆ ವಾಡಿ, ಎಕರೆಗೆ ವರ್ಷಕ್ಕೆ 25 ಸಾವಿರ ಬಾಡಿಗೆ ಕೊಡಿಸಲು ಚಿಂತನೆ ನಡೆಸಲಾಗಿದೆ. ತುಮಕೂರು-ರಾಯದುರ್ಗ ರೈಲ್ವೆ ಯೋಜನೆ ಪ್ರಗತಿಯಲ್ಲಿದ್ದು, ತುಮಕೂರು-ಚಾಮರಾಜನಗರ ರೈಲ್ವೆ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.

ರಾಷ್ಟ್ರೀಯ ಕ್ರಿಬ್ಕೋ ನಿರ್ದೇಶಕ ಆರ್.ರಾಜೇಂದ್ರ, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಎನ್.ಗಂಗಣ್ಣ, ಜಿಪಂ ಸದಸ್ಯ ಜಿ.ಜೆ.ರಾಜಣ್ಣ, ತಾಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ, ಸದಸ್ಯ ಸೊಸೈಟಿ ರಾಮಣ್ಣ, ಗ್ರಾಪಂ ಅಧ್ಯಕ್ಷೆ ನಾಗಮ್ಮ, ಉಪಾಧ್ಯಕ್ಷ ರಾಮಣ್ಣ, ಪುರಸಭೆ ವಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಪಾವಗಡ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಸೀತಾರಾಮ್ ಇದ್ದರು.

ಐದು ಬಾರಿ ಸಂಸದನಾಗಿದ್ದು, 60 ವರ್ಷಗಳ ರಾಜಕೀಯ ಅನುಭವವಿದೆ. ಸರ್ಕಾರದ ಅಧಿಕೃತ ಕಾರ್ಯಕ್ರಮಗಳಿಗೆ ಸಂಸದರಿಗೆ ಆಹ್ವಾನ ನೀಡದಂತೆ ಕ್ಷೇತ್ರದ ಶಾಸಕರು ಅಧಿಕಾರಿಗಳಿಗೆ ಹೇಳುತ್ತಾರೆ. ಕ್ಷೇತ್ರದ ಅಭಿವೃದ್ಧಿಗೆ ಸಂಸದರು ಹಾಗೂ ಶಾಸಕರು ಕೊಂಡಿಯಾಗಿ ಶ್ರಮಿಸಬೇಕಿದೆ. ಜಿ.ಎಸ್.ಬಸವರಾಜು ಸಂಸದ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net