ಆದರ್ಶ ಗ್ರಾಮ ಕಾಮಗಾರಿ ಪೂರ್ಣಗೊಳಿಸಿ : ಸಂಸದ ಬಿ.ಎನ್​. ಬಚ್ಚೇಗೌಡ ಸೂಚನೆ

2
ದೇವನಹಳ್ಳಿಯ ಜಿಪಂ ಸಭಾಂಗಣದಲ್ಲಿ ಬುಧವಾರ ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಸದ ಬಿ,ಎನ್​ ಬಚ್ಚೇಗೌಡ, ಜಿಲ್ಲಾಧಿಕಾರಿ ಕೆ ಶ್ರೀನಿವಾಸ್​, ಜಿಪಂ ಸಿಇಒ ರೇವಣಪ್ಪ, ಜಿಪಂ ಉಪ ಕಾರ್ಯದರ್ಶಿ ಡಾ.ನಾಗರಾಜ ಮತ್ತಿತರರು ಇದ್ದರು.
Published on

ಬೆಂಗಳೂರು ಗ್ರಾಮಾಂತರ: ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಮಗಳಲ್ಲಿ ಅವಶ್ಯವಿರುವ ರಸ್ತೆ, ನೀರು, ಶಾಲೆ, ಅಂಗನವಾಡಿ, ಗ್ರಂಥಾಲಯ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಬೇಕು ಎಂದು ಸಂಸದ ಬಿ.ಎನ್​.ಬಚ್ಚೇಗೌಡ ಸೂಚಿಸಿದರು

ದೇವನಹಳ್ಳಿಯ ಜಿಪಂ ಸಭಾಂಗಣದಲ್ಲಿ ಬುಧವಾರ ದಿಶಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ರೈತರು, ದುರ್ಬಲ ವರ್ಗದವರು, ಮಹಿಳೆಯರು ಸೇರಿ ಎಲ್ಲರಿಗೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ರೇಷ್ಮೆ ಕೃಷಿ ಉತ್ತೇಜಿಸಿ: ಜಿಲ್ಲೆಯಲ್ಲಿ ರೈತರು ಸ್ವ&ಇಚ್ಛೆಯಿಂದ ನೀಲಗಿರಿ ಮರಗಳನ್ನು ತೆರವುಗೊಳಿಸಿ ಹಿಪ್ಪುನೇರಳೆ ಕೃಷಿ ಕೈಗೊಳ್ಳುವಂತೆ ಉತ್ತೇಜಿಸಲು ರೇಷ್ಮೆ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಇದರೊಂದಿಗೆ ಇತರ ಬೆಳೆಗಳ ವಿಸ್ತರಣೆಗೂ ಆದ್ಯತೆ ನೀಡಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳ ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಬೇಕು. ಕೃಷಿ, ತೋಟಗಾರಿಕೆ ಬೆಳೆಗಳಿಗೆ ನೀಡಲಾಗುವ ವಿಮೆ ಯೋಜನೆ ಹಾಗೂ ವಿವಿಧ ಯೋಜನೆಗಳ ಕುರಿತ ಕರಪತ್ರ ಹಂಚುವ ಮೂಲಕ ಅರಿವು ಮೂಡಿಸಬೇಕು ಎಂದರು.

ನೀರಿಗೆ ಆದ್ಯತೆ ನೀಡಿ: ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಎಚ್ಚರವಹಿಸಬೇಕು. ಪ್ರತಿ ಮನೆಗಳಿಗೆ ಕೊಳಾಯಿ ಮೂಲಕ ನೀರು ಪೂರೈಕೆಗೆ ಚೆಕ್​ ಡ್ಯಾಂ ನಿರ್ಮಾಣ, ಕೆರೆಗಳಲ್ಲಿ ಹೂಳೆತ್ತುವುದು ಸೇರಿ ಅಂತರ್ಜಲ ಹೆಚ್ಚಿಸುವ ಕಾಮಗಾರಿ ನಡೆಸಬೇಕು, ನೀರು ಸಂಸ್ಕರಣೆ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ಸಿದ್ಧಪಡಿಸಿ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಕ್ಕೆ ಪ್ರಸ್ತಾವನೆ ಸಲ್ಲಿಸಿದರೆ ಅನುದಾನ ದೊರೆಯಲಿದೆ. ಎಚ್​ಎನ್​ ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳು ಶ್ರೀ ಪೂರ್ಣಗೊಂಡಲ್ಲಿ ಹಲವು ಕೆರೆಗಳಿಗೆ ನೀರು ತುಂಬಲಿದ್ದು, ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದು ಸಂಸದರು ತಿಳಿಸಿದರು.

ಅರ್ಹರಿಗೆ ಸೌಲಭ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕೈಗೊಳ್ಳಲಾದ ಮನೆ ನಿರ್ಮಾಣ ಕಾಮಗಾರಿಗಳನ್ನು ಶ್ರೀ ಪೂರ್ಣಗೊಳಿಸಿ, ಅರ್ಹ ಫಲಾನುಭವಿಗಳಿಗೆ ವಸತಿ ಸೌಲಭ್ಯ ಒದಗಿಸಬೇಕೆಂದು ಸಂಸದರು ತಾಕೀತು ಮಾಡಿದರು. 15ನೇ ಹಣಕಾಸು ಯೋಜನೆಯಡಿ ಬಿಡಿಗಡೆಯಾದ ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಬಳಕೆ ಮಾಡಲು ಶ್ರೀ ಕ್ರಿಯಾಯೋಜನೆ ಸಿದ್ಧಪಡಿಸಿ,ಅನುಮೋದನೆ ಪಡೆಯುವಂತೆ ತಾಪಂ ಇಒಗಳಿಗೆ ತಿಳಿಸಿದರು. ಸ್ವಚ್ಛ ಭಾರತ್​ ಮಿಷನ್​ ಯೋಜನೆಯಡಿ ಜಿಲ್ಲೆಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ನ ತ್ಯಾಜ್ಯ ವಿಲೇವಾರಿ ಟಕ ನಿರ್ಮಾಣಕ್ಕೆ ಜಾಗ ನೀಡಲಾಗಿದ್ದು, ಟಕ ನಿರ್ಮಾಣಕ್ಕೆ ಸ್ಥಳಿಯ ಸಂಸ್ಥೆಗಳ ನೆರವು ಪಡೆಯಬೇಕು ಹಾಗೂ ಗ್ರಾಪಂಗಳಲ್ಲಿ ಅರಿವು ಮೂಡಿಸಬೇಕು ಎಂದರು.

ಅಧಿಕಾರಿಗಳಿಗೆ ಕಿವಿಮಾತು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನಾಲ್ಕು ಜಿಲ್ಲೆಗಳನ್ನು ಒಳಗೊಂಡಿದೆ. ಅಧಿಕಾರಿಗಳು ಒತ್ತಡ ಕಡಿಮೆ ಮಾಡಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ ಪ್ರಗತಿಯಲ್ಲಿ ಜಿಲ್ಲೆಯನ್ನು ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಬೇಕು ಎಂದು ಸಂಸದರು ಕಿವಿಮಾತು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net