ಹಿಂದೂ ಹಬ್ಬಗಳ ಆಚರಣೆಗೆ ಕಾಂಗ್ರೆಸ್ ಸರ್ಕಾರದಿಂದ ಅಡ್ಡಿ : ಸಂಸದ ಕ್ಯಾ. ಬ್ರಿಜೇಶ್ ಚೌಟ ಆಕ್ರೋಶ

IMG-20240408-WA0344
Published on


ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಿಂದೂ ಹಬ್ಬಗಳ ಆಚರಣೆಗೆ ಅನಗತ್ಯ
ನಿಯಮಗಳನ್ನು ಅಡ್ಡಿ ಪಡಿಸುತ್ತಿದೆ ಎಂದು ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆ ಮಾಡಿರುವುದಕ್ಕೆ ಆಯೋಜಕರು ಹಾಗೂ ಸೌಂಡ್ ಸಿಸ್ಟಮ್‌ನವರ ಮೇಲೆ ಪ್ರಕರಣ ದಾಖಲಿಸಿರುವುದು . ಪೊಲೀಸರಿಗೆ ಈ ರೀತಿ ಏಕಾಏಕಿ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ರೀತಿಯ
ನಿಯಮಗಳನ್ನು ರೂಪಿಸುವುದಕ್ಕೆ ನಿರ್ದೇಶನ ನೀಡಿದವರು ಯಾರು ? ಸಿದ್ದರಾಮಯ್ಯ ಸರ್ಕಾರವೇ ಹಿಂದೂಗಳ ಧಾರ್ಮಿಕ ಆಚರಣೆಗೆ ಪೊಲೀಸರ ಮೂಲಕ ಈ ರೀತಿಯ ನಿಯಮಗಳನ್ನು ತಂದು ಜನರಿಗೆ ತೊಂದರೆ ಮಾಡುತ್ತಿದೆಯೇ ಎನ್ನುವ ಅನುಮಾನ ಮೂಡಿದೆ ಎಂದು ಅವರು ತಿಳಿಸಿದ್ದಾರೆ.
ಧ್ವನಿವರ್ಧಕ ಉದ್ಯಮ ನಂಬಿಕೊಂಡಿರುವ ಜನರು ಆರ್ಥಿಕವಾಗಿ ಬಹಳಷ್ಟು ತೊಂದರೆಗೀಡಾಗಿದ್ದಾರೆ. ಪರಿಸ್ಥಿತಿ ಹೀಗೆ ಮುಂದುವರಿಗೆ ಇನ್ನು ಚೌತಿ, ಹುಲಿವೇಷ, ನವರಾತ್ರಿಯಂಥ ಹಬ್ಬದ ಆಚರಣೆಗೂ ಸಾಕಷ್ಟು ತೊಂದರೆಯಾಗಲಿದೆ. ಸರ್ಕಾರ
ಕೂಡಲೇ ಮಧ್ಯಪ್ರವೇಶ ಮಾಡಿ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಹಬ್ಬದ ಕಾರ್ಯಕ್ರಮಗಳನ್ನು ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಸಂಸದರು ಒತ್ತಾಯಿಸಿದ್ದಾರೆ.
....................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net