ಬೆಳ್ಳಾರೆ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

03
Published on

ಸುಳ್ಯ: ನಿರ್ಮಾಣ ಹಂತದಲ್ಲಿರುವ ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಸರವನ್ನು ವೀಕ್ಷಿಸಿದರು.

ಬಳಿಕ ನಡೆದ ಸಭೆಯಲ್ಲಿ ದೇವಸ್ಥಾನ ನಿರ್ಮಾಣಕ್ಕೆ ದಾನಿಗಳಿಂದ ಆರ್ಥಿಕ ಸಂಗ್ರಹಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಸಂಸದರು ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ದೇವಾಲಯದ ವತಿಯಿಂದ ಗೌರವಿಸಲಾಯಿತು. ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಎಸ್.ಅಂಗಾರ, ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಹಾಸ ಮಣಿಯಾಣಿ ಪಡ್ಪು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ, ಪ್ರಧಾನ ಕಾರ್ಯದರ್ಶಿ ಆರ್.ಕೆ.ಭಟ್ ಕುರುಂಬುಡೇಲು, ಆಡಳಿತ ಮಂಡಳಿ ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಕೋಶಾಧಿಕಾರಿ ಆನಂದ ಪಡ್ಪು, ಮಾತೃ ಮಂಡಳಿ ಅಧ್ಯಕ್ಷೆ ಸುಮಾ ವಿ.ಆಚಾರ್, ಪದಾಧಿಕಾರಿಗಳಾದ ಜಗದೀಶ್ ರೈ ತಂಬಿನಮಕ್ಕಿ, ಚಂದ್ರಶೇಖರ ಪನ್ನೆ, ಕ್ಯಾ.ಸುಧಾನಂದ ಮಣಿಯಾಣಿ, ತೀರ್ಥರಾಮ ಮಣಿಮಜಲು, ಮನು ತೊಂಡಚ್ಚನ್, ರಮೇಶ್ ನಾಯಕ್ ಪನ್ನೆ, ನಾಗೇಶ್ ಕುಲಾಲ್, ಉದ್ಯಮಿ ದೇವಿಪ್ರಸಾದ್ ಶೆಟ್ಟಿ ಬೆಳ್ಳಾರೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net