ಧ್ವಜಾರೋಹಣಕ್ಕೆ ದಿಗ್ವಿಜಯ ಸಿಂಗ್

d SINGH
Published on

ಹುಬ್ಬಳ್ಳಿ: ಇಲ್ಲಿಯ ಕಾರವಾರ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಆ. 15ರಂದು ಬೆಳಗ್ಗೆ 9.30ಕ್ಕೆ ರಾಜ್ಯಸಭಾ ಸದಸ್ಯ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿದಿಗ್ವಿಜಯ ಸಿಂಗ್ ಧ್ವಜಾರೋಹಣ ನೆರವೇರಿಸುವರು.

ಖಾಸಗಿ ಕಾರ್ಯಕ್ರಮದ ನಿಮಿತ್ತ ಶನಿವಾರ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ತೆರಳಿದ್ದ ಅವರು ಸೋಮವಾರ ರಾತ್ರಿ ಹುಬ್ಬಳ್ಳಿಗೆ ಮರಳಿದ್ದರು. ಮಂಗಳವಾರ ಬೆಳಗ್ಗೆ ಕಾಂಗ್ರೆಸ್ ಕಚೇರಿಯಲ್ಲಿ ಸ್ವಾತಂತ್ರ್ಯೊತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್, ಶಾಸಕ ಪ್ರಸಾದ ಅಬ್ಬಯ್ಯ ಪಾಲ್ಗೊಳ್ಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net