ಅಪಘಾತ ತಪ್ಪಿಸಲು ರಸ್ತೆ ವಿಭಜಕ ನಿರ್ಮಾಣ

hnl hanumasagar july 15
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಹೊನ್ನಾಳಿ: ಹೊನ್ನಾಳಿ- ರಾಣೆಬೆನ್ನೂರು ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಹೆಚ್ಚುತ್ತಿದೆ. ಇದನ್ನು ತಪ್ಪಿಸಲು ರಸ್ತೆ ವಿಭಜಕವನ್ನು ಅಳವಡಿಸುವಂತೆ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದು, ಸಂಬಂಧಪಟ್ಟ ಶಾಸಕರು, ಸಚಿವರ ಜತೆ ಮಾತನಾಡಿ ನಿರ್ವಿುಸಲಾಗುವುದು ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಮಂಗಳವಾರ ಸಂಸದರ ಅನುದಾನದಲ್ಲಿ 10 ಲಕ್ಷ ರೂ. ಶ್ರೀ ಆಂಜನೇಯಸ್ವಾಮಿ ಸಮುದಾಯ ಭವನ, 15 ಲಕ್ಷ ರೂ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ಕೊಠಡಿಗಳು, 15 ಲಕ್ಷ ರೂ. ಹೊನ್ನಾಳಿ ಶಾದಿ ಮಹಲ್ ಹಾಗೂ 15 ಲಕ್ಷ ರೂ. ಅರಕೆರೆ ವಿಎಸ್​ಎಸ್​ಎನ್ ಕಟ್ಟಡ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸ್ಮಾರ್ಟ್ ಬೋರ್ಡ್ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಜತೆಗೆ ಗ್ರಾಮದ ಸ್ವಸಹಾಯ ಸಂಘಗಳಿಗೆ ಆರ್ಥಿಕ ಸಹಾಯ ಧನ ಅಥವಾ ಸಾಲಸೌಲಭ್ಯ ನೀಡುವಂತೆ ಮಾಡಿಕೊಂಡಿದ್ದ ಮನವಿಗೆ ಸ್ಪಂದಿಸುವುದಾಗಿ ತಿಳಿಸಿದರು.

ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿ, ಸಮುದಾಯ ಭವನಕ್ಕೆ ಸಂಸದರು ಇನ್ನೂ 10 ಲಕ್ಷ ರೂ. ಅನುದಾನ ನೀಡುವ ಮೂಲಕ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಹೊನ್ನಾಳಿ- ಶಿವಮೊಗ್ಗ ರಾಜ್ಯ ಹೆದ್ದಾರಿಗೆ 15 ಕೊಟಿ ರೂ. ಅನುದಾನ ತರುತ್ತಿದ್ದೇನೆ. ಜತೆಗೆ ಶೀಘ್ರವೇ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಹರಿಹರ- ಹೊನ್ನಾಳಿ ರಸ್ತೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಗಮನಕ್ಕೆ ತರುತ್ತೇವೆ ಎಂದರು.

ಗ್ರಾಪಂ ಅಧ್ಯಕ್ಷೆ ಶ್ರುತಿ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎ. ಗದ್ದಿಗೇಶ್, ಸಾಸ್ವೇಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ನಾಗಪ್ಪ, ಮುಖಂಡ ಎಚ್.ಎ. ಉಮಾಪತಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net