ಹರಿಹರ -ವಿವಿಗೆ ತಡೆರಹಿತ ಬಸ್

Hrr22Mp1a
Published on

ಹರಿಹರ: ಹರಿಹರದಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ತಡೆರಹಿತ ಸಾರಿಗೆ ಬಸ್ ವ್ಯವಸ್ಥೆಗೆ ಗುರುವಾರ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡಿ, ಬಸ್​ನಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಯಾಣ ಬೆಳೆಸಿದರು.

ಹರಿಹರ ನಗರ ಸೇರಿ ತಾಲೂಕಿನ ಗ್ರಾಮಾಂತರ ಪ್ರದೇಶದಿದ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ವಿವಿಗೆ, ದಾವಣಗೆರೆಯಿಂದ ಪ್ರಯಾಣಿಸಬೇಕಿತ್ತು. ಇದರಿಂದ ಸಮಯಕ್ಕೆ ಸರಿಯಾಗಿ ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆಶಯದಂತೆ ಹರಿಹರದಿಂದ ನೇರವಾಗಿ ವಿವಿಗೆ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

ಈ ವೇಳೆ ವಿದ್ಯಾರ್ಥಿಗಳು ಸಂತಸ ವ್ಯಕ್ತಪಡಿಸಿ ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಸಂಸದರೊಂದಿಗೆ ಹಂಚಿಕೊಂಡು ಸ್ಪಂದನೆಗೆ ಧನ್ಯವಾದ ಅರ್ಪಿಸಿದರು.

ಹರಿಹರ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಿಂದ ಪ್ರತಿನಿತ್ಯ ಬೆಳಗ್ಗೆ 8.30, 8.45, 9, 9.15 ಕ್ಕೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ ಬಸ್ ತೆರಳಲಿದೆ. ಸಂಜೆ 5, 5.15, 5.30, 5.45 ಕ್ಕೆ ದಾವಣಗೆರೆ ವಿವಿಯಿಂದ ಹರಿಹರಕ್ಕೆ ಆಗಮಿಸಲಿದೆ ಎಂದು ಸಾರಿಗೆ ಅಧಿಕಾರಿಗಳು ಮಾಹಿತಿ ನೀಡಿದರು.

ನಗರಸಭೆ ಉಪಾಧ್ಯಕ್ಷ ಸೈಯದ್ ಅಲೀಂ, ಕಾಂಗ್ರೆಸ್ ಮುಖಂಡರಾದ ನಂದಿಗಾವಿ ಶ್ರೀನಿವಾಸ್, ಕೃಷ್ಣಾಸಾ ಭೂತೆ, ಸಿ.ಎನ್. ಹುಲುಗೇಶ್, ಬಾನುವಳ್ಳಿ ದಾದಾಪೀರ್, ವಿದ್ಯಾರ್ಥಿಗಳು, ಕೆಎಸ್​ಆರ್​ಟಿಸಿ ಅಧಿಕಾರಿಗಳು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net