ಸ್ಮಾರ್ಟ್ ಸಿಟಿ ಕಾಮಗಾರಿ ‌ಪರಿಶೀಲಿಸಿದ ಸಂಸದ ಶೆಟ್ಟರ್

IMG-20240619-WA0061.jpg
Published on

ಬೆಳಗಾವಿ: ಇಲ್ಲಿನ ಬೆಳಗಾವಿ ಸ್ಮಾರ್ಟ್ ಸಿಟಿ ನಿಯಮಿತ ಕಛೇರಿಗೆ ಸಂಸದ  ಜಗದೀಶ ಶೆಟ್ಟರ ಅವರು ಬುಧವಾರ  ಭೇಟಿನೀಡಿ ಪ್ರಗತಿ ಪರಿಶೀಲನಾ ಸಭೆಯ ನಡೆಸಿದರು.
ಸಭೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾದ ಕಾಮಗಾರಿಗಳ ವಿವರವನ್ನು ಹಾಗೂ ಸಧ್ಯದ ಸ್ಥಿತಿಗತಿಯ ಮಾಹಿತಿಯನ್ನು ಸಂಸದರು ಪಡೆದುಕೊಂಡರು. ಇದಲ್ಲದೇ ಈಗಾಗಲೇ ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿದ್ದು ಮಹಾನಗರ ಪಾಲಿಕೆ‌ ಮತ್ತು ಸಂಬಂಧಪಟ್ಟ ಇಲಾಖೆಗಳಿಗೆ ಕಾಮಗಾರಿಗಳನ್ನು ಕೂಡಲೇ ಹಸ್ತಾಂತಗೊಳಿಸಬೇಕೆಂದು ನಿರ್ದೇಶನ ನೀಡಿದರು.
ಶಾಸಕ ಅಭಯ ಪಾಟೀಲ, ಸ್ಮಾರ್ಟ್ ಸಿಟಿ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿ ಸಯೀದಾ ಆಫ್ರೀನ್ ಬಾನು ಬಳ್ಳಾರಿ ಇತರರಿದ್ದರು.

ಇದೇ ಸಂದರ್ಭದಲ್ಲಿ ಪ್ರಗತಿ ಪರಿಶೀಲನಾ ಸಭೆಯ ನಂತರ ಸಂಸದರು ಸ್ಮಾರ್ಟ್ ಸಿಟಿ‌ ವತಿಯಿಂದ ಅಭಿವೃದ್ಧಿಪಡಿಸಲಾದ ಡಿಜಿಟಲ್ ಗ್ರಂಥಾಲಯ, ಮಹಾತ್ಮಾ ಫುಲೆ ಉದ್ಯಾನ, ಕಲಾಮಂದಿರ ಮತ್ತು ಸಿ.ಬಿ.ಟಿ ಕಾಮಗಾರಿಗಳಿಗೆ ಭೇಟಿನೀಡಿ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಸಯೀದಾ ಆಫ್ರೀನ್ ಬಾನು ಬಳ್ಳಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net