

ಕುಂದಾಪುರ: ಪ್ರಧಾನಮಂತ್ರಿ ಜನ್ ಮನ್ ಯೋಜನೆಯಡಿ ಹಕ್ಲಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂಜಾಡಿ-2ರ ಮಕ್ಕಳಕಟ್ಟೆ ರಸ್ತೆ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಸಂಸದ ಬಿ.ವೈ.ರಾಘವೇಂದ್ರ ಬುಧವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. ಇದೇ ವೇಳೆ ಸಂಸದರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ಮಾಣಿಕೊಳಲು ದೇವಸ್ಥಾನದ ಕೆರೆ ಅಭಿವೃದ್ಧಿ, ಬ್ರಹ್ಮೇರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಅನುದಾನ ಮಂಜೂರಾದರೂ, ಬಿಡುಗಡೆಯಾಗದ, ಹಕ್ಲಾಡಿ ಗ್ರಾ.ಪಂ. ವ್ಯಾಪ್ತಿಯ ವಿವಿಧ ರಸ್ತೆಗಳ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಕೋರಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಇಲಾಖೆ ಎಂಜಿನಿಯರ್ ರವಿಶಂಕರ್, ಐಟಿಡಿಪಿ ಇಲಾಖೆಯ ನಾರಾಯಣ ಸ್ವಾಮಿ, ತಾ.ಪಂ. ಮಾಜಿ ಅಧ್ಯಕ್ಷೆ ಇಂದಿರಾ ಶೆಟ್ಟಿ, ಬಿಜೆಪಿ ಮಂಡಲದ ಅಧ್ಯಕ್ಷೆ ಅನಿತಾ ಆರ್.ಕೆ., ಮಾಜಿ ಅಧ್ಯಕ್ಷ ದೀಪಕ್‌ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಹಕ್ಲಾಡಿ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಮೊಗವೀರ, ಉಪಾಧ್ಯಕ್ಷ ಸುಭಾಶ್ ಶೆಟ್ಟಿ ಹೊಳ್ಮಗೆ, ಮಾಜಿ ಅಧ್ಯಕ್ಷ ಚೇತನ್ ಮೊಗವೀರ, ಸದಸ್ಯರಾದ ಭಾಸ್ಕರ ಪೂಜಾರಿ, ಪ್ರವೀಣ್ ಶೆಟ್ಟಿ, ಶಾರದಾ ಮೊಗವೀರ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.