ಸಂಸದ ಜಗದಾಂಬಿಕಾ ಪಾಲ್ ಪ್ರವಾಸ

images
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸಂಸದ ಹಾಗೂ ವಕ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನ. 7ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 6.05ಕ್ಕೆ ದೆಹಲಿಯಿಂದ ವಿಮಾನ ಮೂಲಕ ಹೊರಟು 8.45ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ವಕ್ ಆಸ್ತಿ ಎಂದು ನಮೂದಾಗಿರುವ ರೈತರು ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ತೆರಳುವರು. ಸಂಜೆ 6.40ಕ್ಕೆ ಬೆಳಗಾವಿಯಿಂದ ವಿಮಾನದ ಮೂಲಕ ದೆಹಲಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net