ಹೊನಗನಹಳ್ಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಜಿಗಜಿಣಗಿ

Trek to Srishaila from 12
Invitation to a poetry competition
Published on

ವಿಜಯಪುರ: ನಗರ ಹೊರವಲಯದ ಹೊನಗನಹಳ್ಳಿ ಬಳಿಯ ವಿಜಯಪುರ& ಬಾಗಲಕೋಟೆ ರಾಷ್ಟ್ರೀಯ ಹೆದ್ದಾರಿಯ ರೈಲ್ವೆ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಸದರಿ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಬಹುದಿನಗಳಿಂದ ಸಾರ್ವಜನಿಕರ ಒತ್ತಾಯವಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ನಿತಿನ್​ ಗಡ್ಕರಿ ಅವರನ್ನು ಭೇಟಿಯಾಗಿ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 70 ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ರೈಲ್ವೆ ಮೇಲ್ಸೇತುವೆ ಕಾಮಗಾರಿ ಸದ್ಯ ಅಂತಿಮ ಹಂತದಲ್ಲಿದೆ. ಕೂಡಲೇ ಮೇಲ್ಸೇತುವೆ ಲೋಕಾರ್ಪಣೆಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಅಭಿಯಂತರ ವಿಜಯ ಪಾಟೀಲ, ಸಹಾಯಕ ಕಾರ್ಯಪಾಲಕ ಅಭಿಯಂತರ ವಿವೇಕ ಮಠ, ಬಿಜೆಪಿ ಮಾಧ್ಯಮ ಪ್ರಮುಖ ವಿಜಯ ಜೋಶಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net