

ಭಾಲ್ಕಿ: ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದಾಗಿ ಸಂಸದ ಸಾಗರ ಖಂಡ್ರೆ ಹೇಳಿದರು.
ಮರೂರ ಗ್ರಾಮದಲ್ಲಿ ಜಲಜೀವನ ಮಿಷನ್(ಜೆಜೆಎಂ) ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದಲ್ಲಿ ಸುಮಾರು ೭೫ ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅನುದಾನ ಒದಗಿಸಿ ಗ್ರಾಮದಲ್ಲಿ ಶಾಲಾ ಕೋಣೆ, ಗ್ರಾಪಂ ಕಟ್ಟಡ ನಿರ್ಮಿಸಿದ್ದು, ಅವುಗಳ ಸದ್ಬಳಕೆ ಆಗಬೇಕು ಎಂದು ಹೇಳಿದರು.
ಕುಡಿಯುವ ನೀರು ಸರಬರಾಜು ಇಲಾಖೆಯ ಇಇ ರಾಮಲಿಂಗ ಬಿರಾದಾರ, ಪ್ರಮುಖರಾದ ಭಾಗ್ಯವತಿ ಆನಂದಕುಮಾರ, ಜಗನ್ನಾಥ ಮಜಗೆ, ಬಸಪ್ಪ ಚಿಮಕೋಡೆ ಇತರರಿದ್ದರು.
ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಗ್ರಾಮೀಣ ಭಾಗದ ಅಭಿವೃದ್ಧಿ, ಕುಡಿಯುವ ನೀರು, ಶಿಕ್ಷಣ, ಮೂಲ ಸೌಲಭ್ಯಗಳ ಪೂರೈಕೆಗೆ ಒತ್ತು ನೀಡಿದ್ದಾರೆ. ಅದರಂತೆ ನಾನು ಕೂಡ ಕೇಂದ್ರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಪ್ರಯತ್ನ ಮಾಡುವೆ.
| ಸಾಗರ್ ಖಂಡ್ರೆ ಸಂಸದ ಬೀದರ್