ಮಂಗಳೂರು : ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರವಿಶಂಕರ ಮಿಜಾರ್, ನಂದನ್ ಮಲ್ಯ, ಕಿರಣ ಕೋಡಿಕಲ್ ಉಪಸ್ಥಿತರಿದ್ದರು.