ಫಲಿತಾಂಶಕ್ಕೂ ಮೊದಲು ಸಂಸದರಾದ ಎಂ.ಲಕ್ಷ್ಮಣ್ ! : ಆಹ್ವಾನ ಪತ್ರಿಕೆಯಲ್ಲಿ ಸಂಸದ ಎಂ.ಲಕ್ಷಣ್ ಎಂದು ನಮೂದು

11
Published on

ಮೈಸೂರು: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೂ ಮುನ್ನ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರನ್ನು ಸಂಸದರನ್ನಾಗಿ ಮಾಡಲಾಗಿದೆ.

ಇದೇ ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದಿದ್ದು, ಜೂನ್ 4ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಆದರೆ, ಫಲಿತಾಂಶಕ್ಕೂ ಮುನ್ನ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಲಕ್ಷ್ಮಣ್ ಅವರನ್ನು ಬೀಗರ ಔತಣ ಕೂಟದ ಆಹ್ವಾನ ಪತ್ರಿಕೆಯಲ್ಲಿ ಮೈಸೂರು-ಕೊಡಗು ಲೋಕಸಭಾ ಸದಸ್ಯರು ಎಂದು ನಮೂದಿಸಲಾಗಿದೆ. ಇದೀಗ ಈ ಆಹ್ವಾನ ಪತ್ರಿಕೆ ಎಲ್ಲೆಡೆ ವೈರಲ್ ಆಗಿದೆ.

ಮೈಸೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಮಗಳ ಮದುವೆ ಬೀಗರ ಔತಣ ಆಹ್ವಾನ ಪತ್ರಿಕೆಯಲ್ಲಿ ಲಕ್ಷ್ಮಣ್ ಅವರನ್ನು ಮೈಸೂರು ಕೊಡಗು ಸಂಸದ ಎಂದು ನಮೂದಿಸಲಾಗಿದೆ. ಮೇ 12 ರಂದು ಬೀಗರ ಔತಣ ಕೂಟ ಇದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಮುಡಾ ಅಧ್ಯಕ್ಷ ಮರೀಗೌಡ ಸೇರಿ ಹಲವರ ಹೆಸರು ಆಹ್ವಾನ ಪತ್ರಿಕೆಯಲ್ಲಿ ನಮೂದಿಸಲಾಗಿದೆ. ಅದರಂತೆ ಲಕ್ಷ್ಮಣ್ ಲೋಕಸಭಾ ಸದಸ್ಯರು ಎಂದು ನಮೂದು ಮಾಡಲಾಗಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಇನ್ನು ಈ ಆಹ್ವಾನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net