ಸಾರ್ವಜನಿಕರಿಗೆ ಸ್ಪಂದಿಸದಿದ್ದರೆ ಬಿಗಿ ಕ್ರಮ

03HDK06 JAna SPANDANA
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 34;
Published on

ಅಧಿಕಾರಿಗಳಿಗೆ ಸಂಸದ ಸುನಿಲ್ ಬೋಸ್ ಎಚ್ಚರಿಕೆ  * ಎಚ್.ಡಿ.ಕೋಟೆಯಲ್ಲಿ ಜನಸ್ಪಂದನ ಕಾರ್ಯಕ್ರಮ

ಎಚ್.ಡಿ.ಕೋಟೆ : ಸರ್ಕಾರಿ ಕಚೇರಿಗಳ ಸಿಬ್ಬಂದಿ ಮತ್ತು ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸದಿದ್ದರೆ ಬಿಗಿ ಕ್ರಮ ವಹಿಸಲಾಗುವುದು ಎಂದು ಸಂಸದ ಸುನಿಲ್ ಬೋಸ್ ತಿಳಿಸಿದರು. ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಧಿಕಾರಿಗಳು ಜನರೊಂದಿಗೆ ಸರಿಯಾಗಿ ವರ್ತಿಸುತ್ತಿಲ್ಲ ಎಂಬ ದೂರುಗಳಿವೆ. ಅಂಥವರನ್ನು ವರ್ಗಾವಣೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಅಧಿಕಾರಿಗಳು ಕಚೇರಿಗಳಲ್ಲೇ ಕೂರುವ ಬದಲು ಕ್ಷೇತ್ರಕ್ಕೆ ಹೋಗಿ ಜನರ ಸಮಸ್ಯೆ ಕೇಳಿ ಬಗೆಹರಿಸಬೇಕು. ಮಧ್ಯವರ್ತಿಗಳ ಮೂಲಕ ಹಣ ನೀಡಿದರೆ ಮಾತ್ರ ಕೆಲಸ ಆಗುತ್ತದೆ ಎಂಬ ದೂರುಗಳು ಇವೆ. ಬಡವರು ಎಲ್ಲಿಂದ ಹಣ ನೀಡಬೇಕು ? ಜನರ ಕೆಲಸಗಳನ್ನು ನ್ಯಾಯಸಮ್ಮತವಾಗಿ ಮಾಡಿ ಎಂದು ತಾಕೀತು ಮಾಡಿದರು.

ಕಾಲಹರಣ ಮಾಡುತ್ತಿದ್ದಾರೆ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಜನರಿಗೆ ಸ್ಪಂದಿಸುತ್ತಿಲ್ಲ. ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುತ್ತಿದ್ದಾರೆ ಎಂದು ಮಟಕೆರೆ ಕೃಷ್ಣ ಎಂಬವರು ಸಂಸದರಿಗೆ ದೂರು ನೀಡಿದರು. ತಾರಕ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಬಿದ್ದಾಗ ಜಂಗಲ್ ಕಟ್ ಮಾಡಲು ಮುಂದಾಗುತ್ತಿದ್ದಾರೆ. ಇದರಿಂದ ಕೊನೇ ಭಾಗದ ರೈತರಿಗೆ ನೀರು ಸಿಗುತ್ತಿಲ್ಲ ಎಂದು ಚೌಡಹಳ್ಳಿ ಜವರಯ್ಯ ದೂರು ಹೇಳಿದರು. ನಾಲೆಯ ಅಚ್ಚುಕಟ್ಟು ಪ್ರದೇಶದಲ್ಲಿ ಕಾಮಗಾರಿ ಮಾಡಲು ಡಿಪಿಆರ್ ತಯಾರಿಸಿ ಎಂದು ಸಂಸದರು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಅಡುಗೆ ಮಾಡಬೇಕು: ಕೆಲವು ಅಂಗನವಾಡಿ ಕೇಂದ್ರದಲ್ಲಿ ದಲಿತ ಮಹಿಳೆಯರು ಅಡುಗೆ ಮಾಡುತ್ತಾರೆ. ಹಾಗಾಗಿ ಯಾವ ಮಕ್ಕಳೂ ಊಟ ಮಾಡುವುದಿಲ್ಲ. ಅದಕ್ಕಾಗಿ ಮನೆಮನೆಗೆ ಆಹಾರ ಪದಾರ್ಥ ನೀಡುತ್ತಿದ್ದಾರೆ ಎಂಬ ದೂರುಗಳಿವೆ. ಯಾವ ಮಕ್ಕಳು ಊಟ ಮಾಡುತ್ತಾರೋ, ಬಿಡುತ್ತಾರೋ ಗೊತ್ತಿಲ್ಲ. ಮೊದಲು ಅಡುಗೆ ಮಾಡಿ ಎಂದು ಸಂಸದರು ತಾಕೀತು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net