

ಉಡುಪಿ: ಲೋಕಸಭಾ ವ್ಯಾಪ್ತಿಯ ಸಾರ್ವಜನಿಕರ ಬೇಡಿಕೆ ಮತ್ತು ಕುಂದುಕೊರತೆ ಆಲಿಸಲು ಸಂಸದರ ಕಚೇರಿ ಪ್ರಾರಂಭಿಸಲಾಗಿದೆ. ಜನಹಿತ ಕೆಲಸಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಜನಸಾಮಾನ್ಯರ ಕಚೇರಿಯಾಗಿ ಕೆಲಸ ಮಾಡಲಿದೆ ಎಂದು ಉಡುಪಿ-&ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮವಾರ ಮಣಿಪಾಲದ 'ರಜತ್ರಾದ್ರಿ'ಯ 'ಸಿ' ಬ್ಲಾಕ್ನಲ್ಲಿ ಉಡುಪಿ&-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ನೂತನ ಸಂಸದರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರ ಆಶಯಕ್ಕೆ ಪೂರಕವಾಗಿ ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಕಚೇರಿ ಮೂಲ ಉದ್ದೇಶ ಎಂದರು.
ಮಾಜಿ ನಗರಸಭೆ ಅಧ್ಯಕ್ಷ ಗುಜ್ಜಾಡಿ ಪ್ರಭಾಕರ ನಾಯಕ್ ಉದ್ಘಾಟಿಸಿದರು. ಶಾಸಕರಾದ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್, ಮಾಜಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಸಂಸದರ ಪತ್ನಿ ಶಾಂತಾ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಗಣಪತಿ ಹೋಮ ನೆರವೇರಿತು.