

ಮೈಸೂರು; ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಟ್ವಿಟ್ಟರ್ ನಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ.
ಬೆಳಿಗ್ಗೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಗೆ ರೋಗಿಯೊಬ್ಬರನ್ನು ಭೇಟಿಯಾಗಲು ಹೋಗಿದ್ದೆ. ನಂತರ ರ್ಯಾಪಿಡ್ ಟೆಸ್ಟ್ ಮಾಡಿಸಿದಾಗ ಕರೊನಾ ನೆಗಟಿವ್ ಬಂದಿತ್ತು. ಆದರೆ, ನಂತರ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿದಾಗ ಕರೊನಾ ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲ. ಹಾಗಾಗಿ ನನ್ನ ಸಂಪರ್ಕಕ್ಕೆ ಬಂದವರು ಐಸೊಲೇಷನ್ ನಲ್ಲಿ ಇರಿ ಎಂದು ಮನವಿ ಮಾಡಿದ್ದಾರೆ.