ಗ್ರಾಮೀಣ ಅಭಿವೃದ್ಧಿಗೆ ನರೇಗಾ ಸಹಕಾರಿ

Untitled design (31)
Published on

ಹನುಮಸಾಗರ: ಕಾಲಮಿತಿಯಲ್ಲಿ ಅಭಿವೃದ್ಧಿ ಯೋಜನೆಗಳ ಪ್ರಗತಿ ಸಾಧಿಸಬೇಕು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಸಮೀಪದ ಹನುಮನಾಳ ಗ್ರಾಮದ ವಾಲ್ಮೀಕಿ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹೋಬಳಿ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಉದ್ಯೋಗ ಖಾತ್ರಿ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಅಭಿವೃದ್ಧಿ ಯೋಜನೆಗಳು ಕಾಲಮಿತಿಯಲ್ಲಿ ಪ್ರಗತಿ ಸಾಧಿಸಬೇಕು. ಗ್ರಾಮೀಣ ಭಾಗದ ಅಭಿವೃದ್ಧಿಗೆ ನರೇಗಾ ಸಹಕಾರಿಯಾಗಿದೆ. ಈ ಯೋಜನೆಯಡಿ ಎಲ್ಲರಿಗೂ ನಿಯಮದ ಪ್ರಕಾರ ಅವಕಾಶ ಕಲ್ಪಿಸಬೇಕು. ಮಾನವ ದಿನಗಳ ಸೃಜನೆಯಲ್ಲಿ ಪ್ರಗತಿ ಸಾಧಿಸದ ಪಂಚಾಯಿತಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ ಮುಂದಿನ ಸಭೆಯಲ್ಲಿ ನೀಡಿರುವ ಗುರಿ ಸಾಧಿಸಿಬೇಕು ಎಂದರು.

ಹೋಬಳಿ ವ್ಯಾಪ್ತಿಯ ಹನುಮನಾಳ, ಮಾಲಗಿತ್ತಿ, ಯರಗೇರಾ, ತುಗ್ಗಲಡೋಣಿ, ಬಿಳೇಕಲ್, ಬೆನಕನಾಳ, ಹಿರೇಗೊಣ್ಣಾಗರ, ಜಹಗೀರ ಗುಡದೂರ, ತುಮರಿಕೊಪ್ಪ, ಹಾಬಲಕಟ್ಟಿ, ನಿಲೋಗಲ್ ಗ್ರಾಪಂಗಳ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ವಸತಿ ಯೋಜನೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪಿಆರ್‌ಇಡಿ ಇಲಾಖೆ ಸೇರಿ ವಿವಿಧ ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ದಿಶಾ ಸಮಿತಿ ಸದಸ್ಯ ದೊಡ್ಡಬಸನಗೌಡ ಪಾಟೀಲ್ ಬಯ್ಯಪುರ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಫಾರೂಕ್ ದಲಾಯತ್, ಜಿಪಂ ಜಿಲ್ಲಾ ಯೋಜನಾ ನಿರ್ದೇಶಕ ವಿ.ಪ್ರಕಾಶ, ತಾಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಂಪಾಪತಿ ಹಿರೇಮಠ, ತಹಸೀಲ್ದಾರ್ ಅಶೋಕ ಶಿಗ್ಗಾವಿ, ತಾಲೂಕು ವೈದ್ಯಾಧಿಕಾರಿ ಆನಂದ ಗೊಟೂರು, ಗ್ರಾಪಂ ಅಧ್ಯಕ್ಷೆ ಸುಜಾತಾ ತವರಪ್ಪ ಚಿಕನಾಳ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net