'ವರಿಷ್ಠರ ನಿರ್ಧಾರಕ್ಕೆ ಬದ್ದ, ಜನ ಸೇವೆಯೇ ನನ್ನ ಕಾಯಕ': ಎಂಪಿ ರೇಣುಕಾಚಾರ್ಯ

rnr
Published on

ಬೆಂಗಳೂರು: ಸಚಿವ ಸ್ಥಾನ ಕೈತಪ್ಪುತ್ತಿದ್ದಂತೆ ಕಾವೇರಿ ನಿವಾಸದಲ್ಲಿ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಶಾಸಕ ರೇಣುಕಾಚಾರ್ಯ ಎರಡು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಕಾರ್ಯಕರ್ತರಿಗೆ ಸಮಾಧಾನ ಹೇಳಿದ್ದಾರೆ.

'ಪಕ್ಷ ನನಗೆ ತಾಯಿ ಸಮಾನ, ನನ್ನ ಪಕ್ಷ, ಸಂಘಟನೆ ಹಾಗೂ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ದನಾಗಿದ್ದೇನೆ. ಜನ ಸೇವೆಯೇ ನನ್ನ ಕಾಯಕ, ನನ್ನ ಸಂಪೂರ್ಣ ಜೀವನವನ್ನು ನನ್ನ ಮತ ಕ್ಷೇತ್ರದ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ ಜನತೆಯ ಸೇವೆಗೆ ಮುಡಿಪಿಟ್ಟಿದ್ದೇನೆ ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

'ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ನಿರಾಶರಾಗದೆ ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಂಘಟಿಸಲು ವಿನಂತಿಸುತ್ತೇನೆ ಎನ್ನುವ ಮೂಲಕ ಕಾರ್ಯಕರ್ತರಿಗೆ ಧೈರ್ಯ ತುಂಬಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net