ಸಂಸದೀಯ ಸ್ಥಾಯಿ ಸಮಿತಿಗೆ ಶೆಟ್ಟರ್ ನೇಮಕ

MP shettar
Published on

ಹುಬ್ಬಳ್ಳಿ: ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅವರನ್ನು ರಕ್ಷಣಾ ಇಲಾಖೆಯ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಮಿತಿಯಲ್ಲಿ ಒಟ್ಟು 31 ಜನ ಸದಸ್ಯರಿದ್ದು, ಇದರಲ್ಲಿ 10 ಜನ ರಾಜ್ಯಸಭಾ ಸದಸ್ಯರು ಹಾಗೂ 21ಜನ ಲೋಕಸಭಾ ಸದಸ್ಯರು ಇದ್ದಾರೆ. ರಾಧಾ ಮೋಹನ ಸಿಂಗ್ ಸಮಿತಿಯ ಅಧ್ಯಕ್ಷರಾಗಿದ್ದಾರೆ. ನೇಮಕಾತಿ ಬಗ್ಗೆ ಸಂಸದ ಜಗದೀಶ ಶೆಟ್ಟರ್ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net