ಶ್ರೀನಿವಾಸ್ ಪ್ರಸಾದ್ ಆರೋಗ್ಯ ಗಂಭೀರ

Srinivas prasad
Published on

ಬೆಂಗಳೂರು: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಓಲ್ಡ್ ಏರ್ಪೋಟ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.

ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿರುವ ಅವರು ಏ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯ ಹಿರಿಯ ವೈದ್ಯಕೀಯ ತಂಡವು ಶ್ರೀನಿವಾಸ್ ಪ್ರಸಾದ್ ಅವರಿಗೆ ಆಮ್ಲಜನಕ ಸಂಪರ್ಕದೊಂದಿಗೆ ಚಿಕಿತ್ಸೆ ನೀಡುತ್ತಿದ್ದು, ಐಸಿಯು ಘಟಕದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net