

ಮೈಸೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಂಡಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಜನಸಾಮಾನ್ಯರಿಗೆ ಕಷ್ಟವಾಗಲಿದ್ದು, ಸಾರ್ವಜನಿಕರ ಆರ್ಥಿಕ ಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದರು.
ಪ್ರವಾಸ ಆರಂಭಿಸಿದ್ದೇನೆ: ನಿರೀಕ್ಷೆಯಂತೆ ಈಗಾಗಲೇ ಮಳೆಗಾಲ ಆರಂಭವಾಗಬೇಕಿತ್ತಾದರೂ, ಮಳೆ ಬಂದಿಲ್ಲ. ಶೀಘ್ರವೇ ಮಳೆಗಾಲ ಆರಂಭವಾಗಲೆಂದು ಪ್ರಾರ್ಧಿಸುತೇನೆ. ಈಗಾಗಲೇ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಆರಂಭಿಸಿದ್ದು, ಈಗಾಗಲೇ ಕೊಡಗು ಜಿಲ್ಲೆಗೂ ಭೇಟಿ ನೀಡಿದ್ದೇನೆ. ಮೈಸೂರು ನಗರದಲ್ಲೂ ಕೃಷ್ಣರಾಜ ಕ್ಷೇತ್ರಕ್ಕೂ ಸಹ ಭೇಟಿ ನೀಡಿದ್ದೇನೆ. ಬರಗಾಲಕ್ಕೆ ಸಂಬಂಧಿಸಿದಂತೆ ಏನೆಲ್ಲ ಪರಿಹಾರ ನೀಡಬೇಕೆಂಬುದನ್ನು ಮುಂದಿನ ದಿನಗಳಲ್ಲಿ ಚಿಂತಿಸುತ್ತೇನೆ ಎಂದು ಹೇಳಿದರು.