ಬೆಳಗಾವಿ ರೈಲ್ವೆ ಫ್ಲೈಓವರ್ ಕಳಪೆ ಕಾಮಗಾರಿ ತನಿಖೆಗೆ ಬಿಜೆಪಿ ರಾಜ್ಯಸಭಾ ಸದಸ್ಯ ಕಡಾಡಿ ಒತ್ತಾಯ

IMG-20241019-WA0007.jpg
Published on

ಬೆಳಗಾವಿ: ಕಳಪೆ ಕಾಮಗಾರಿಯಿಂದಾಗಿ ಮೇಲ್ಸೇತುವೆ ಹಾಳಾಗಿರುವ ಕುರಿತು ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈಲ್ವೆ ಮೇಲ್ಸೇತುವೆ ಕಾಮಗಾರಿ ಕಳಪೆ ಮಟ್ಟದಾಗಿರುವ ಕುರಿತು ಮಾಹಿತಿ ಇರಲಿಲ್ಲ. ಇದೀಗ ಅದು ಗಮನಕ್ಕೆ ಬಂದಿದ್ದು, ತನಿಖೆ ನಡೆಸಿ ಗುತ್ತಿಗೆದಾರನ ವಿರುದ್ಧ ರೈಲ್ವೆ ಇಲಾಖೆಗೆ ಸೂಚನೆ ನೀಡಲಾಗುವುದು. ಸಚಿವರ ಗಮನಕ್ಕೆ ತರಲಾಗುವುದು ಎಂದರು.

ಮಾಜಿ ಶಾಸಕ ಸಂಜಯ ಪಾಟೀಲ, ಎಂ.ಬಿ.ಝಿರಲಿ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಪಾಲಿಕೆ ಸದಸ್ಯ ಹಣಮಂತ ಕೊಂಗಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net