ಅಂಬೇಡ್ಕರ್ ಜಯಂತ್ಯುತ್ಸವಕ್ಕೆ ಸಂಸದರಿಗೆ ಆಹ್ವಾನ

29 apr tnp 03
ತಿ.ನರಸೀಪುರದಲ್ಲಿ ಮೇ 9ರಂದು ತಾಲೂಕು ಮಟ್ಟದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಮೈಸೂರಿನಲ್ಲಿ ಸಂಸದ ಸುನೀಲ್ ಬೋಸ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ಸಂಘದಿಂದ ಸನ್ಮಾನಿಸಿ ಆಹ್ವಾನಿಸಲಾಯಿತು. ಕರೋಹಟ್ಟಿ ಮಹದೇವಯ್ಯ, ಎಸ್.ಎನ್.ಸಿದ್ದಾರ್ಥ, ತುಂಬಲ ಅಂದಾನಿ, ಸಿ.ಪ್ರಕಾಶ್, ಮಂಜುನಾಥ್, ಕುಕ್ಕೂರು ಗಣೇಶ್, ಸೋಸಲೆ ಮಹದೇವಸ್ವಾಮಿ, ಎಂ.ಪರಶಿವಮೂರ್ತಿ ಇದ್ದರು.
Published on

ತಿ.ನರಸೀಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ ಪಟ್ಟಣದಲ್ಲಿ ಮೇ 9 ರಂದು ತಾಲೂಕು ಮಟ್ಟದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವವನ್ನು ಅದ್ದೂರಿಯಾಗಿ ಆಯೋಜಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಅಂಬೇಡ್ಕರ್ ಅಭಿವೃದ್ಧಿ ಸಂಘದಿಂದ ಸಂಸದ ಸುನೀಲ್ ಬೋಸ್ ಅವರನ್ನು ಆಹ್ವಾನಿಸಲಾಯಿತು.

ಮೈಸೂರು ನಗರದಲ್ಲಿರುವ ಸಂಸದರ ನಿವಾಸದಲ್ಲಿ ಸುನೀಲ್ ಬೋಸ್ ಅವರನ್ನು ಭೇಟಿಯಾದ ತಾಲೂಕು ಅಂಬೇಡ್ಕರ್ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಮುಖಂಡರು ಸಂಸದರನ್ನು ಸನ್ಮಾನಿಸಿ, ಅಧಿಕೃತವಾಗಿ ಮೊದಲ ಆಹ್ವಾನ ನೀಡಿ, ತಾಲೂಕು ಮಟ್ಟದ ಅಂಬೇಡ್ಕರ್ ಜಯಂತ್ಯುತ್ಸವ ಆಚರಣೆಯ ಯಶಸ್ವಿಗೆ ಸಂಪೂರ್ಣ ಸಹಕಾರ ನೀಡುವಂತೆ ಕೋರಿದರು.

ಸಂಘದ ಅಧ್ಯಕ್ಷ ಕರೋಹಟ್ಟಿ ಮಹದೇವಯ್ಯ, ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್.ಸಿದ್ದಾರ್ಥ, ತಾಪಂ ಮಾಜಿ ಅಧ್ಯಕ್ಷ ತುಂಬಲ ಅಂದಾನಿ, ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಸದಸ್ಯ ಸೋಸಲೆ ಮಹದೇವಸ್ವಾಮಿ, ಭೂ ನ್ಯಾಯ ಮಂಡಳಿ ಸದಸ್ಯ ಕುಕ್ಕೂರು ಗಣೇಶ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಪ್ರಕಾಶ್, ಸೋಸಲೆ ಪಿಎಸಿಸಿ ಮಾಜಿ ಅಧ್ಯಕ್ಷ ಎಂ.ಪರಶಿವಮೂರ್ತಿ, ದಲಿತ ಜಾಗೃತಿ ಸಮಿತಿಯ ಮಾಜಿ ಜಿಲ್ಲಾಧ್ಯಕ್ಷ ತುಂಬಲ ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net