ಶ್ರೀ ಯೋಗಾ ನರಸಿಂಹಸ್ವಾಮಿ ದೇಗುಲಕ್ಕೆಸಂಸದರ ಭೇಟಿ

TKE 3 (AJP) (1)
Published on

ತರೀಕೆರೆ: ಅಜ್ಜಂಪುರದ ಬಗ್ಗವಳ್ಳಿ ಗ್ರಾಮದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇಗುಲಕ್ಕೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ದೇಗುಲದ ಅಭಿವೃದ್ಧಿ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿದರು. ನಂತರ ದೇವರಿಗೆ ಪೂಜೆ ಸಲ್ಲಿಸಿ ಆರ್ಶೀವಾದ ಪಡೆದರು. ಮಾಜಿ ಶಾಸಕ ಡಿ.ಎಸ್.ಸುರೇಶ್, ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು, ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಆರ್.ಆನಂದಪ್ಪ, ಜಿಪಂ ಮಾಜಿ ಅಧ್ಯಕ್ಷ ಕೆ.ಆರ್.ಧ್ರುವಕುಮಾರ್, ಬಿಜೆಪಿ ಮಂಡಲ ಅಧ್ಯಕ್ಷ ಗರಗದಹಳ್ಳಿ ಪ್ರತಾಪ್, ಪ್ರಧಾನ ಕಾರ್ಯದರ್ಶಿ ಬಿ.ಸಿ.ಬಸವರಾಜ್, ಗ್ರಾಮಸ್ಥರಾದ ಜಿ.ವಿ.ಪ್ರಭು, ಬಿ.ಪಿ.ಪ್ರಭುಕುಮಾರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net