ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿಗೆ ಶ್ರೀ ಅನುಮೋದನೆ

Mr. Approval for Basavanbagewadi Development Board
ಶಿವಾನಂದ ಪಾಟೀಲ
Published on

ಬಸವನಬಾಗೇವಾಡಿ: ಮುಂದಿನ ವರ್ಷದ ಶ್ರಾವಣ ಮಾಸದಲ್ಲಿ ಬಸವೇಶ್ವರ ಜಾತ್ರಾ ಮಹೋತ್ಸವ ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿಯಿಂದ ನೆರವೇರುತ್ತದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ಪಟ್ಟಣದ ಬಸವೇಶ್ವರ (ಮೂಲನಂದೀಶ್ವರ) ಜಾತ್ರಾ ಮಹೋತ್ಸವದ ಪಲ್ಲಕ್ಕಿ ಉತ್ಸವದಲ್ಲಿ ಸೋಮವಾರ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಪ್ರತಿವರ್ಷ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ಅಚ್ಚುಕಟ್ಟಾಗಿ ಜಾತ್ರಾಮಹೋತ್ಸವ ಜರುಗುತ್ತಿದೆ. ಮುಂದಿನ ವರ್ಷದಿಂದ ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿಯಿಂದ ನೆರವೇರುತ್ತದೆ ಎಂದು ಹೇಳಿದರು.

ನಾಡಿನ ವಿವಿಧ ಮಠಾಧೀಶರು ಹಾಗೂ ಬಸವಭಕ್ತರ ಬಹುದಿನದ ಬೇಡಿಕೆಯಾದ ಬಸವನಬಾಗೇವಾಡಿ ಅಭಿವೃದ್ಧಿ ಮಂಡಳಿ ರಚನೆ ಕಳೆದ ಬಜೆಟ್​ ಮಂಡನೆಯಲ್ಲಿ ೂಷಣೆಯಾಗಿದ್ದು, ಶ್ರೀದಲ್ಲೇ ಅನುಮೋದನೆ ದೊರೆಯಲಿದೆ ಎಂದು ಹೇಳಿದರು.

ಈಗಾಗಲೇ ಕೂಡಲಸಂಗಮ ಅಭಿವೃದ್ಧಿ ಮಂಡಳಿಯಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿದೆ. ಬಸವೇಶ್ವರ ದೇವಸ್ಥಾನ ಹಾಗೂ ಬಸವಣ್ಣನವರ ಜನ್ಮಸ್ಥಳವಾದ ಬಸವನಬಾಗೇವಾಡಿ ಪಟ್ಟಣದ ಅಭಿವೃದ್ಧಿಗಾಗಿ ಪ್ರತೇಕ ಮಂಡಳಿ ರಚನೆ ಮಾಡಿದ್ದು, ರಾಜ್ಯಸರ್ಕಾರ ವಿಶೇಷ ಆಸಕ್ತಿ ವಹಿಸಿ ಅಭಿವೃದ್ಧಿ ಮಾಡಲು ಬದ್ಧವಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net