ಗ್ರಾಮೀಣದಲ್ಲಿ ಸಕಲ ಆರೋಗ್ಯ ವ್ಯವಸ್ಥೆ : ಡಾ.ಎಚ್.ಎಸ್.ಬಲ್ಲಾಳ್

sanjeevani
ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್. ಮಣಿಪಾಲ್ ನೇತ್ರ ಸಂಜೀವಿನಿ ಕಾರ್ಯಕ್ರಮವನ್ನು ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಿದರು. ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಸುರೇಶ್ ರಾವ್, ಎಂ.ಆರ್.ಪಿ ಎಲ್.ನ ಕೃಷ್ಣ ಹೆಗ್ಡೆ, ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಮತ್ತಿತರರು ಉಪಸ್ಥಿತರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಕಟೀಲು

ದುರ್ಗಾ ಸಂಜೀವಿನಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲ ವ್ಯವಸ್ಥೆಯನ್ನು ಹೊಂದಿದ ಏಕೈಕ ಆಸ್ಪತ್ರೆಯಾಗಿದೆ. ಕಟೀಲು ಸುರೇಶ್ ರಾಯರ ಕನಸಿನಂತೆ ಆಸ್ಪತ್ರೆ ನಿರ್ಮಾಣವಾಗಿದೆ ಎಂದು ಡಾ.ಎಚ್.ಎಸ್.ಬಲ್ಲಾಳ್ ಹೇಳಿದರು.

ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯಲ್ಲಿ ಎಂ.ಆರ್.ಪಿ.ಎಲ್. ಮಣಿಪಾಲ್ ನೇತ್ರ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರೋಗಿಗಳಿಗೆ ಕೈಗೆಟಕುವ ದರದಲ್ಲಿ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಬಡ ಜನರಿಗೆ ಈ ಆಸ್ಪತ್ರೆ ಅತ್ಯಂತ ಅನುಕೂಲ. ಮುಂದಿನ ದಿನಗಳಲ್ಲಿ ಆರೋಗ್ಯ ಸೇವೆಯನ್ನು ಮನೆ ಮನೆಗೆ ಮುಟ್ಟಿಸುತ್ತೇವೆ. ಎಂಆರ್‌ಪಿಎಲ್ ಸಹಕಾರದಿಂದ ಇದೀಗ ರೋಗಿಗಳಿಗೆ ಉನ್ನತ ಗುಣಮಟ್ಟದ ಕಣ್ಣಿನ ಆರೋಗ್ಯ ಸೇವೆ ನೀಡುವಂತಾಗುತ್ತಿದೆ ಎಂದರು.

ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆಯ ಸುರೇಶ್ ರಾವ್ ಮಾತನಾಡಿ, ಕಟೀಲು ದೇವಳದ ವತಿಯಿಂದ ವಿದ್ಯಾದಾನ, ಅನ್ನದಾನ ಸಿಗುತ್ತಿವೆ. ಉತ್ತಮ ಆರೋಗ್ಯ ಸೇವೆಗಾಗಿ ಮಂಗಳೂರಿನಂತಹ ಮಹಾನಗರಕ್ಕೆ ಹೋಗಬೇಕು. ಈ ಸಮಸ್ಯೆ ಪರಿಹಾರಕ್ಕೆ ಕಟೀಲಿನಲ್ಲಿ ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆ ಪ್ರಾರಂಭಿಸಲಾಗಿದೆ ಎಂದರು.

ಎಂ.ಆರ್.ಪಿ ಎಲ್.ನ ಕೃಷ್ಣ ಹೆಗ್ಡೆ ಮಾತನಾಡಿ, ನಮ್ಮ ಸಂಸ್ಥೆ ಕಳೆದ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದೆ. ಶಿಕ್ಷಣ, ಆರೋಗ್ಯ, ಸಂಸ್ಕೃತಿ, ಕಲೆ ಹೀಗೆ ಎಲ್ಲ ಕ್ಷೇತ್ರಗಳಿಗೂ ಸಹಕಾರ ನೀಡಿದೆ ಎಂದರು.

ಕಟೀಲು ದೇವಳದ ಮೊಕ್ತೇಸರ ವಾಸುದೇವ ಆಸ್ರಣ್ಣ ಆಶೀರ್ವಚನ ನೀಡಿದರು. ಎಂ.ಆರ್.ಪಿ.ಎಲ್.ನ ಕೃಷ್ಣ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಡಾ.ಶಿವಾನಂದ ಪ್ರಭು, ಡಾ.ಉನ್ನಿಕೃಷ್ಣನ್, ಡಾ.ಆನಂದ್ ವೇಣುಗೋಪಾಲ್, ಬಿಪಿನ್ ಚಂದ್ರ ಶೆಟ್ಟಿ ಕೊಡೆತ್ತೂರು ಗುತ್ತು ಮತ್ತಿತರರು ಉಪಸ್ಥಿತರಿದ್ದರು. ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net