ಮೌಢ್ಯದ ವಿರುದ್ಧ ಹೋರಾಡಿದ ಶ್ರೀಗಳು

Mrs who fought against silliness
ಇಳಕಲ್ಲ ತಹಸೀಲ್ದಾರ್ ಕಚೇರಿಯಲ್ಲಿ ವ್ಯಸನಮುಕ್ತ ದಿನಾಚರಣೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ತಹಸೀಲ್ದಾರ್ ಸತೀಶ ಕೂಡಲಗಿ, ಈಶ್ವರ ಗಡ್ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಮುರಳಿ ದೇಶಪಾಂಡೆ, ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಚೇತನಾ ಶ್ಯಾವಿ, ಪೌರಾಯುಕ್ತ ಶ್ರೀನಿವಾಸ ಜಾಧವ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ, ಬಸವಕೇಂದ್ರ ಅಧ್ಯಕ್ಷ ಶಿವಾನಂದ ರೂಳಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಮಹಾದೇವ ಕಂಬಾಗಿ ಇದ್ದರು.
Published on

ಇಳಕಲ್ಲ: ಜನರ ದುಶ್ಚಟಗಳನ್ನು ತಮ್ಮ ಜೋಳಿಗೆಗೆ ಹಾಕಿಸಿಕೊಂಡು ಇಡೀ ನಾಡಿನಲ್ಲಿ ವ್ಯಸನಮುಕ್ತ ದಿನವನ್ನು ಆಚರಿಸುವಂತೆ ಮಾಡಿದ ಶ್ರೇಯಸ್ಸು ಡಾ ಮಹಾಂತ ಶ್ರೀಗಳಿಗೆ ಸಲ್ಲುತ್ತದೆ ಎಂದು ವೀರಶೈವ ಲಿಂಗಾಯತ ಅಭಿವದ್ಧಿ ನಿಗಮದ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಗುರುವಾರ ನಡೆದ ವ್ಯಸನಮುಕ್ತ ದಿನಾಚರಣೆ ಅಂಗವಾಗಿ ತಾಲೂಕಾಡಳಿತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಡಾ ಮಹಾಂತ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಜನರಲ್ಲಿ ತುಂಬಿಕೊಂಡಿದ್ದ ಎಲ್ಲ ರೀತಿಯ ಮೌಢ್ಯಗಳನ್ನು ಹೋಗಲಾಡಿಸುವಲ್ಲಿ ಶ್ರೀಗಳು ಮಾಡಿದ ಹೋರಾಟ ಅತ್ಯಂತ ದೊಡ್ಡದು ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ್ದ ಗುರುಮಹಾಂತ ಶ್ರೀಗಳು ಮಾತನಾಡಿ, ಸರ್ಕಾರದ ವತಿಯಿಂದ ರಾಜ್ಯದ ಎಲ್ಲೆಡೆ ವ್ಯಸನಮುಕ್ತ ದಿನ ಆಚರಿಸಲು ಆದೇಶ ಮಾಡಿ ಉತ್ತಮ ಕಾರ್ಯವನ್ನು ಮಾಡಲಾಗಿದೆ. ಅದಕ್ಕಾಗಿ ಸರ್ಕಾರವನ್ನು ನಾವು ಅಭಿನಂದಿಸುತ್ತೇವೆ ಎಂದು ಹೇಳಿದರು. ಹಲವಾರು ವಿದ್ಯಾರ್ಥಿಗಳು ವಿವಿಧ ವೇಷದಲ್ಲಿ ಮಿಂಚಿದರು. ಪ್ರಶಸ್ತಿ ವಿಜೇತ ಮಕ್ಕಳಿಗೆ ಶಾಸಕರು ಬಹುಮಾನಗಳನ್ನು ವಿತರಿಸಿದರು.

ತಹಸೀಲ್ದಾರ್ ಸತೀಶ ಕೂಡಲಗಿ, ಈಶ್ವರ ಗಡ್ಡಿ , ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಮುರಳಿ ದೇಶಪಾಂಡೆ, ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಚೇತನಾ ಶ್ಯಾವಿ, ಪೌರಾಯುಕ್ತ ಶ್ರೀನಿವಾಸ ಜಾಧವ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ, ಬಸವಕೇಂದ್ರ ಅಧ್ಯಕ್ಷ ಶಿವಾನಂದ ರೂಳಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಮಹಾದೇವ ಕಂಬಾಗಿ, ಮಾಜಿ ಅಧ್ಯಕ್ಷ ಸಂಗಣ್ಣ ಗದ್ದಿ, ಅಕ್ಕನ ಬಳಗದ ಅಧ್ಯಕ್ಷೆ ಸುವರ್ಣ ಗೊಂಗಡಶೆಟ್ಟಿ, ಮಹೇಶಪ್ಪ ಸಜ್ಜನ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net