ಬಿಮ್ಸ್ ನಲ್ಲಿ ಬಾಣಂತಿ ಸಾವು; ತಪ್ಪಿತಸ್ಥ ರ ವಿರುದ್ಧ ಕ್ರಮ; ಸಚಿವ ಸತೀಶ ಜಾರಕಿಹೊಳಿ

IMG-20241101-WA0018.jpg
Published on

ಬೆಳಗಾವಿ:ಬಾಣಂತಿ ಸಾವು ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ನಗರಸಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯ ಪ್ರತಿಷ್ಠಿತ ಬಿಮ್ಸ್ ಆಸ್ಪತ್ರೆಯಲ್ಲಿ ಇದೀಗ ಬಾಣಂತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮೂರು ಜನರ ನೇತೃತ್ವದಲ್ಲಿ ಕಮಿಟಿ ಮಾಡಿ ತನಿಖೆ ನಡೆಸಲಾಗುತ್ತದೆ. ತಪ್ಪಿತಸ್ಥ ವೈದ್ಯರ ವಿರುದ್ದ ಪೊಲೀಸ್‌ ಕೇಸ್ ದಾಖಲಿಸಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net