ಮುಡಾ ಬಜೆಟ್ : 831.80 ಕೋಟಿ ರೂ.ಆಯವ್ಯಯಕ್ಕೆ ಅನುಮೋದನೆ

muda budget
Published on

ಮೈಸೂರು: ನಗರದ ಬೆಳವಣಿಗೆಗೆ ಪೂರಕವಾಗಿ ಹೊರಪರಿಧಿ ರಸ್ತೆ (ಪೆರಿಫೆರಲ್ ರಿಂಗ್ ರೋಡ್), ಗ್ರೇಡ್ ಸಪರೇಟರ್, ಗುಂಪು ಮನೆ ನಿರ್ಮಾ ಣಕ್ಕೆ ಈ ಬಾರಿಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬಜೆಟ್‌ನಲ್ಲಿ ಒತ್ತು ನೀಡಲಾಗಿದ್ದು, ಅಭಿವೃದ್ಧಿಗೆ ಹೊಸ ವೇಗ ನೀಡಲು ಹೊರಪರಿಧಿ ರಸ್ತೆಯಲ್ಲಿ ಹಲವು ಅಭಿವೃದ್ಧಿ ಪೂರಕ ಅಂಶಗಳನ್ನು ಪ್ರಸ್ತಾಪಿಸಲಾಗಿದೆ.

ಮುಡಾ ಅಧ್ಯಕ್ಷ ಕೆ. ಮರಿಗೌಡ ಅಧ್ಯಕ್ಷತೆಯಲ್ಲಿ ಗುರುವಾರ ಮುಡಾ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ 2024-25ನೇ ಸಾಲಿಗೆ ಒಟ್ಟು 831.80 ಕೋಟಿ ರೂ. ಮೊತ್ತದ ಅಂದಾಜು ಆಯವ್ಯಯಕ್ಕೆ ಅನುಮೋದನೆ ಪಡೆ ದರು. ಪ್ರಸಕ್ತ ಆರ್ಥಿಕ ವರ್ಷದಲ್ಲಿ 831.80 ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿದ್ದು, 825.77 ಕೋಟಿ ರೂ.ವೆಚ್ಚ ಮಾಡಲು ಉದ್ದೇಶಿಸಲಾ ಗಿದ್ದು, ಒಟ್ಟು 603.06 ಲಕ್ಷ ರೂ. ಉಳಿತಾಯವನ್ನು ನಿರೀಕ್ಷಿಸಲಾಗಿದೆ.

ಉದ್ಯಾನ ಅಭಿವೃದ್ಧಿಗಿಲ್ಲ ಅನುದಾನ: ಉದ್ಯಾನವನ ಮತ್ತು ತೆರೆದ ಪ್ರದೇಶಗಳ ಅಭಿವೃದ್ಧಿ ನಿಧಿ-03 ಅಡಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಯಾವುದೇ ಸಂಪನ್ಮೂಲ ಕ್ರೋಢೀಕರಣವಾಗದ ಹಿನ್ನೆಲೆಯಲ್ಲಿ ಯಾವುದೇ ಕಾಮಗಾರಿ ಪ್ರಸ್ತಾಪಿಸಿಲ್ಲ. ಕೆರೆ ಪುನರುಜ್ಜಿವನ ನಿಧಿ-02 ರಡಿಯಲ್ಲಿ ಪ್ರಸ್ತಾಪಿಸಿರುವ ಕೆರೆಗಳ ಅಭಿವೃದ್ಧಿಗೆ 55 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.

ಸಭೆಯಲ್ಲಿ ಶಾಸಕರಾದ ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ದರ್ಶನ್ ಧ್ರುವನಾರಾಯಣ, ಕೆ. ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಚ್.ವಿಶ್ವನಾಥ್, ಡಿ. ತಿಮ್ಮಯ್ಯ, ಮಧು ಜಿ. ಮಾದೇಗೌಡ, ದಿನೇಶ್ ಗೂಳಿಗೌಡ, ಮರಿತಿಬ್ಬೇಗೌಡ, ನಗರ ಪಾಲಿಕೆ ಆಯುಕ್ತೆ ಡಾ.ಎನ್.ಎನ್. ಮಧು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net