ಮೈಸೂರು: ಮುಡಾ ಗುಂಪು ಮನೆ ನಿರ್ಮಾಣಕ್ಕೆ 40 ಕೋಟಿ ರೂ.

muda mysore
Published on

ಮೈಸೂರು: ವಿಜಯನಗರ 4ನೇ ಹಂತ 2ನೇ ಘಟ್ಟ ಬಡಾವಣೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಗುಂಪು ಮನೆ ನಿರ್ಮಾಣ ಮಾಡಲು ಬಜೆಟ್‌ನಲ್ಲಿ 40 ಕೋಟಿ ರೂ. ಕಾಯ್ದಿರಿಸಲಾಗಿದೆ.

ಗುಂಪು ಮನೆಯಲ್ಲಿ ಒಟ್ಟು 560 ಮನೆಗಳು, 12 ಮಹಡಿಗಳು ಇರಲಿದ್ದು, ಕಟ್ಟಡವನ್ನು ಶಿಯರ್‌ವಾಲ್ ಟೆಕ್ನಾಲಜಿ ಅಳವಡಿಸಿಕೊಂಡು 250 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುವುದು. ಮೊದಲ ಹಂತದಲ್ಲಿ ಗುಂಪುಮನೆಯ ಒಂದು ಟವರ್ ನಿರ್ಮಿಸಿ ನಂತರ ಹಂತ ಹಂತವಾಗಿ ಯೋಜನೆ ಅನುಷ್ಠಾನಗೊಳಿಸಲಾಗುವುದು. ಈ ಯೋಜನೆಗೆ ಬಜೆಟ್‌ನಲ್ಲಿ 40 ಕೋಟಿ ರೂ. ಕಾಯ್ದಿರಿಸಲಾಗಿದೆ.

ಉದ್ಯಾನ ಅಭಿವೃದ್ಧಿಗಿಲ್ಲ ಅನುದಾನ: ಉದ್ಯಾನವನ ಮತ್ತು ತೆರೆದ ಪ್ರದೇಶಗಳ ಅಭಿವೃದ್ಧಿ ನಿಧಿ-03 ಅಡಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಯಾವುದೇ ಸಂಪನ್ಮೂಲ ಕ್ರೋಢೀಕರಣವಾಗದ ಹಿನ್ನೆಲೆಯಲ್ಲಿ ಯಾವುದೇ ಕಾಮಗಾರಿ ಪ್ರಸ್ತಾಪಿಸಿಲ್ಲ. ಕೆರೆ ಪುನರುಜ್ಜಿವನ ನಿಧಿ-02 ರಡಿಯಲ್ಲಿ ಪ್ರಸ್ತಾಪಿಸಿರುವ ಕೆರೆಗಳ ಅಭಿವೃದ್ಧಿಗೆ 55 ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net