ಮುಡಾ ಪ್ರಕರಣ ರಾಜಕೀಯಕ್ಕೆ ಬಳಕೆ

lakshman (2)
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಚಾರವನ್ನು ಬಿಜೆಪಿ ನಾಯಕರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಮುಡಾಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿರುವ ಬಿಜೆಪಿ ನಾಯಕರನ್ನು ನಾವು ಮುತ್ತಿಗೆ ಹಾಕುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದರು.

ಕಳೆದ 20 ದಿನಗಳಿಂದ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಮುಡಾದಲ್ಲಿ ಯಾವುದೇ ಲೋಪವಾಗಿಲ್ಲ. ಅಧಿಕಾರ ದುರುಪಯೋಗವನ್ನು ಮಾಡಿಲ್ಲ. ಲೋಪವಾಗಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಸವಾಲು ಹಾಕಿದರು.

ಬಿ.ವೈ.ವಿಜಯೇಂದ್ರ 2019ರಲ್ಲಿ ಪರ್ಯಾಯ ಸರ್ಕಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದರು. 50 ಸಾವಿರ ಕೋಟಿ ರೂ.ಲೂಟಿ ಮಾಡಿದ್ದಾರೆಂದು ಆಪಾದಿಸಿದ್ದರು. ಮೊದಲು ಆ ವಿಚಾರವನ್ನು ನಿಖೆಗೆ ಕೊಡುವಂತೆ ಒತ್ತಾಯಿಸಿದರು. ದೇಶದ ಸ್ವಚ್ಛ 10 ಮುಖ್ಯಮಂತ್ರಿಗಳಲ್ಲಿ ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ನಂ.1 ಸ್ಥಾನದಲ್ಲಿದ್ದಾರೆ. ಅವರನ್ನು ತೇಜೋವಧೆ ಮಾಡಲು ಬಿಜೆಪಿ ನಾಯಕರು ಆರೋಪ ಮಾಡುತ್ತಿದ್ದಾರೆ. ಇದು ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net