ಐದು ನೂರು ಸಸಿ ನೆಡುವ ಕಾರ್ಯ

Mudagal parisa day
ಮುದಗಲ್‌ದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಯಿತು. ಪ್ರೌಢಶಾಲೆ ಮುಖ್ಯ ಶಿಕ್ಷಕಿ ಸಿಸ್ಟರ್ ಮರಿಯಮ್ಮ, ವಲಯ ಮೇಲ್ವಿಚಾರಕ ಆಂಜನೇಯ ಇತರರಿದ್ದರು.
Published on

ಮುದಗಲ್: ಪರಿಸರವನ್ನು ಸಂರಕ್ಷಣೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ಅಡಿವಯ್ಯ ಮಾಲಗಿತ್ತಿ ಹೇಳಿದರು.

ಪಟ್ಟಣದ ಕ್ರಿಸ್ತ ಜ್ಯೋತಿ ಪ್ರೌಢಶಾಲೆಯಲ್ಲಿ ಸೋಮವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಲಿಂಗಸುಗೂರ ತಾಲೂಕಿನಲ್ಲಿ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಐದು ನೂರು ಸಸಿಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನೆಡಲಾಗುತ್ತಿದೆ ಎಂದು ಹೇಳಿದರು.

ಕೃಷಿ ಅಧಿಕಾರಿ ಮಹಮ್ಮದ್ ಅಲಿ ಮಾತನಾಡಿ, ಧರ್ಮಸ್ಥಳ ಸಂಘದಿಂದ ಮಹಿಳೆಯರಲ್ಲಿ ಸ್ವ ಸಹಾಯ ಸಂಘಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕಿನಿಂದ ಸಾಲ ವಿತರಣೆ, ನಿರ್ಗತಿಕರಿಗೆ ಮಾಸಾಶನ ಸಂಘದ, ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ, ಕೃಷಿ ಅಭಿವೃದ್ಧಿಗೆ ಅನುದಾನ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೆರೆ ಹೂಳೆತ್ತುವುದು ಸೇರಿದಂತೆ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು. ಸೇವಾ ಪ್ರತಿನಿಧಿ ಶಾರದಾ, ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ವೆಂಕಟೇಶ, ಸುಭಾಸ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net