ಮುದ್ದಂಡ ಹಾಕಿ ಹಬ್ಬ: ಜನಪ್ರತಿನಿಧಿಗಳ ಭೇಟಿ

muddanda
Published on

ಮಡಿಕೇರಿ: ಮುಂದಿನ ವರ್ಷ ನಡೆಯಲಿರುವ ಕೊಡವ ಕುಟುಂಬಗಳ ನಡುವಿನ ೨೫ನೇ ವರ್ಷದ ಪ್ರತಿಷ್ಠಿತ ಮುದ್ದಂಡ ಕಪ್ ಹಾಕಿ ಹಬ್ಬಕ್ಕೆ ಮುದ್ದಂಡ ಕುಟುಂಬಸ್ಥರು ಪೂರ್ವಭಾವಿ ತಯಾರಿಯಲ್ಲಿ ತೊಡಗಿದ್ದಾರೆ. ಜನಪ್ರತಿನಿಧಿಗಳನ್ನು ಭೇಟಿಯಾದ ಕುಟುಂಬದ ಪ್ರಮುಖರು ಹಾಕಿ ಉತ್ಸವದ ಯಶಸ್ಸಿಗಾಗಿ ಸಹಕಾರ ಕೋರಿದರು.

ಮೈಸೂರು-ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕ ಕೆ.ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಅವರುಗಳನ್ನು ಭೇಟಿಯಾದ ಮುದ್ದಂಡ ಕುಟುಂಬಸ್ಥರ ನಿಯೋಗ ೨೦೨೫ರ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆಯುವ ಮುದ್ದಂಡ ಕಪ್ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.

ಮುದ್ದಂಡ ಕುಟುಂಬದ ಅಧ್ಯಕ್ಷ ಮುದ್ದಂಡ ಡಾಲಿ ತಿಮ್ಮಯ್ಯ, ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ, ಗೌರವಾಧ್ಯಕ್ಷ ಮುದ್ದಂಡ ಬಿ.ದೇವಯ್ಯ, ಕಾರ್ಯದರ್ಶಿ ಮುದ್ದಂಡ ಆದ್ಯ ತಿಮ್ಮಯ್ಯ, ಉಪಾಧ್ಯಕ್ಷ ಮುದ್ದಂಡ ಡೀನ್ ಬೋಪಣ್ಣ, ಮುದ್ದಂಡ ಅಶೋಕ್, ಜಂಟಿ ಕಾರ್ಯದರ್ಶಿ ಮುದ್ದಂಡ ರಂಜಿತ್ ಪೊನ್ನಪ್ಪ, ಮುದ್ದಂಡ ಕುಶಾಲಪ್ಪ, ಮುದ್ದಂಡ ರಾಯ್, ಮುದ್ದಂಡ ಕಿರಣ್ ಪೂಣಚ್ಚ, ಮುದ್ದಂಡ ಆದರ್ಶ್, ಮುದ್ದಂಡ ಬನ್ಸಿ ಬೋಪಣ್ಣ ಮತ್ತಿತರರು ನಿಯೋಗದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net