ಮಹಿಳೆಯರ ಬೇಡಿಕೆಗೆ ಶಾಸಕರ ನಿರಾಕರಣೆ

MBL 27-5
Published on

ಮುದ್ದೇಬಿಹಾಳ: ಗ್ರಾಮೀಣ ಭಾಗದಲ್ಲಿ ಬಯಲು ಬಹಿರ್ದೆಸೆಯನ್ನು ಸಂಪೂರ್ಣ ನಿಲ್ಲಿಸಿ ವೈಯಕ್ತಿಕ ಶೌಚಗೃಹ ಬಳಕೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಹೇಳಿದರು.

ತಾಲೂಕಿನ ಬಿದರಕುಂದಿ ಗ್ರಾಮದ ಮಹಿಳೆಯರು ಸಾಮೂಹಿಕ ಶೌಚಗೃಹಕ್ಕೆ ಬೇಡಿಕೆ ಸಲ್ಲಿಸಿದ ವೇಳೆ ಮಾತನಾಡಿದ ಅವರು, ಸರ್ಕಾರ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಗಾಗಿ ಲಕ್ಷಾಂತರ ರೂ. ಅನುದಾನ ಕೊಡುತ್ತಿದೆ. ಅದನ್ನು ಬಳಸಿಕೊಳ್ಳಬೇಕು. ಸಾಮೂಹಿಕ ಶೌಚಗೃಹ ಕಟ್ಟಲು ಸರ್ಕಾರದಲ್ಲಿ ಅವಕಾಶ ಇಲ್ಲ. ವೈಯಕ್ತಿಕ ಶೌಚಗೃಹ ಕಟ್ಟಿಕೊಳ್ಳುವಂತೆ ತಿಳಿಸಿದರು. ಪಿಡಿಒ ಶೋಭಾ ಮುದಗಲ್ ಹಾಗೂ ಗ್ರಾಮದ ಮಹಿಳೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net