ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

MBL-9-4
Published on

ಮುದ್ದೇಬಿಹಾಳ: ಗೋವಾ ರಾಜ್ಯದಲ್ಲಿ ಕನ್ನಡಿಗರ ಉಳಿವಿಗೆ ಕನ್ನಡ ಭವನ ನಿರ್ಮಿಸಬೇಕೆಂದು ಗೋವಾ ಅಖಿಲ ಕನ್ನಡ ಮಹಾ ಸಂಘದ ಪದಾಧಿಕಾರಿಗಳು ಮಂಗಳವಾರ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಅಖಿಲ ಗೋವಾ ಕನ್ನಡಿಗರ ಮಹಾ ಸಂಘದ ಗೌರವಾಧ್ಯಕ್ಷ ಸಿದ್ಧಣ್ಣ ಮೇಟಿ ಮಾತನಾಡಿ, ಗೋವಾ ರಾಜ್ಯದಲ್ಲಿ ಒಟ್ಟು ಐದೂವರೆ ಲಕ್ಷ ಕನ್ನಡಿಗರಿದ್ದು ಅದರಲ್ಲೂ ಉತ್ತರ ಕರ್ನಾಟಕ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರೆಲ್ಲರ ಅಳಿವು ಉಳಿವಿಗಾಗಿ ಕನ್ನಡ ಭವನ ನಿರ್ಮಿಸಬೇಕೆನ್ನುವುದು ನಮ್ಮೆಲ್ಲರ ಒತ್ತಾಸೆಯಾಗಿದೆ. ಈ ಹಿನ್ನೆಲೆಯಲ್ಲಿ ಗೋವಾ ಸರ್ಕಾರದೊಂದಿಗೆ ಚರ್ಚಿಸಿ ಕನ್ನಡ ಭವನ ನಿರ್ಮಿಸಿಕೊಡಬೇಕೆಂದು ವಿನಂತಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಸಂಘದ ಅಧ್ಯಕ್ಷ ಹಣಮಂತರೆಡ್ಡಿ ಶಿರೂರ ತಿಳಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಸಂಘದ ಮುಖಂಡರಾದ ಮಲ್ಲು ಬಾದಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net