ಮುದ್ದೇಬಿಹಾಳ-ಹುಣಸಗಿ-ಮುದ್ದೇಬಿಹಾಳ ನೂತನ ಬಸ್ ಮಾರ್ಗಕ್ಕೆ ಚಾಲನೆ

Muddebihala, Yadagiri, Hunasagi, CS Nadagowda, Raghavendra Kamanatagi, Chandrasekhara Dandin,
ಮುದ್ದೇಬಿಹಾಳ-ಹುಣಸಗಿ-ಮುದ್ದೇಬಿಹಾಳ ನೂತನ ಬಸ್ ಮಾರ್ಗಕ್ಕೆ ಶಾಸಕ, ಕೆಎಸ್‌ಡಿ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಚಾಲನೆ ನೀಡಿದರು.
Published on

ಮುದ್ದೇಬಿಹಾಳ: ಪಟ್ಟಣದ ಸಾರಿಗೆ ಘಟಕದಿಂದ ಯಾದಗಿರಿ ಜಿಲ್ಲೆಯ ಹುಣಸಗಿಗೆ ಹೊಸದಾಗಿ ಪ್ರಾರಂಭಿಸಲಾದ ಮುದ್ದೇಬಿಹಾಳ-ಹುಣಸಗಿ-ಮುದ್ದೇಬಿಹಾಳ ನೂತನ ಬಸ್ ಮಾರ್ಗಕ್ಕೆ ಶಾಸಕ, ಕೆಎಸ್‌ಡಿ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಸೋಮವಾರ ಚಾಲನೆ ನೀಡಿದರು. ಹುಣಸಗಿಯ ಕಿಸಾನ್ ಸಂಘದ ರಾಜ್ಯ ಕಾರ್ಯದರ್ಶಿ ರಾಘವೇಂದ್ರ ಕಾಮನಟಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ದಂಡಿನ್ ಅವರು ಶಾಸಕರನ್ನು ಸನ್ಮಾನಿಸಿದರು. ಹುಣಸಗಿ ಕರವೇ ಅಧ್ಯಕ್ಷ ರಮೇಶ ಬಿರಾದಾರ, ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸನಗೌಡ ಮಾಲಿಪಾಟೀಲ, ಘಟಕ ವ್ಯವಸ್ಥಾಪಕ ಎ.ಎಚ್.ಮದಭಾವಿ, ಸ್ಥಳೀಯ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net