ಮೊಟ್ಟೆ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ

Untitled design (10)
Published on

ಮುದಗಲ್: ಗರ್ಭಿಣಿ ಹಾಗೂ ಬಾಣಂತಿಯರು ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದು ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಬಸ್ಸಮ್ಮ ಹೇಳಿದರು.

ನೀರದೊಡ್ಡಿಯ ಅಂಗನವಾಡಿ ಕೇಂದ್ರ-1ದಲ್ಲಿ 16 ಗರ್ಭಿಣಿ ಹಾಗೂ ಬಾಣಂತಿಯರಿಗೆ ಬುಧವಾರ ಮೊಟ್ಟೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಬೆಳವಣಿಗೆಗೆ ಪೂರಕವಾದ ಪೌಷ್ಟಿಕವುಳ್ಳ ಮೊಟ್ಟೆ ವಿತರಣೆ ಮಾಡಲಾಗುತ್ತಿದೆ. ಗರ್ಭಿಣಿಯರು ಅಂಗನವಾಡಿಯಲ್ಲಿ ದಾಖಲಾತಿ ಪಡೆದು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸ್ತ್ರೀ ಶಕ್ತಿ ಗುಂಪಿನ ಪ್ರತಿನಿಧಿ ರಜಿಯಾಬೇಗಂ ಮೊಟ್ಟೆ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net