ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಸ್ಥಳದಲ್ಲೇ ಸಾವು

04112020 Mudgal Bike accident
Published on

ಮುದಗಲ್: ಪಟ್ಟಣದಿಂದ ಆಶಿಹಾಳ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿನ ಗಂಗಾಧರ ಬಸವಣ್ಣ ದೇವಸ್ಥಾನದ ಬಳಿ ಮಂಗಳವಾರ ತಡ ರಾತ್ರಿ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಲಿಂಗಸುಗೂರು ತಾಲೂಕಿನ ಗೊರೇಬಾಳ ತಾಂಡಾದ ಸುರೇಶ(35) ಮೃತ ಬೈಕ್ ಸವಾರ. ಆಶಿಹಾಳ ತಾಂಡಾಗೆ ತೆರಳುವಾಗ ಘಟನೆ ನಡೆದಿದ್ದು, ಬುಧವಾರ ಬೆಳಗಿನ ಜಾವ ಸಾರ್ವಜನಿಕರು ಗಮನಿಸಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪಿಎಸ್‌ಐ ಡಾಕೇಶ ಯು. ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net