ಸರ್ಕಾರದ ಮಾರ್ಗಸೂಚಿ ಪಾಲಿಸಿ

290822 Mudagal Ganesha festival Shantisabhe
ಮುದಗಲ್ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಶಾಂತಿಸಭೆಯಲ್ಲಿ ಪಿಎಸ್‌ಐ ಪ್ರಕಾಶರೆಡ್ಡಿ ಡಂಬಳ ಭಾನುವಾರ ಮಾತನಾಡಿದರು.
Published on

ಮುದಗಲ್: ಗಣೇಶ ಉತ್ಸವದಲ್ಲಿ ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದರೊಂದಿಗೆ ಮುಂಜಾಗ್ರತಾ ಕ್ರಮಗಳು ಅಗತ್ಯ ಎಂಧು ಮಸ್ಕಿ ಸಿಪಿಐ ಸಂಜೀವ ಬಳಿಗಾರ ಹೇಳಿದರು.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಭಾನುವಾರ ಶಾಂತಿ ಸಭೆಯಲ್ಲಿ ಮಾತನಾಡಿದರು. ಗಣೇಶೋತ್ಸವ ಸಮಿತಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಯಾವುದೇ ಅಹಿತಕರ ಘಟನೆಗೆ ಪ್ರಚೋದನೆ ನೀಡಿದರೆ ಇಲ್ಲವೇ ಭಾಗಿಯಾದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಮಂಡಳಿಯವರು 10 ಜನ ಸ್ವಯಂ ಸೇವಕರನ್ನು ಕಡ್ಡಾಯವಾಗಿ ನೇಮಿಸಬೇಕು. ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಬೇಕು. ಪುರಸಭೆ, ಪೊಲೀಸ್ ಹಾಗೂ ಜೆಸ್ಕಾಂ ಅನುಮತಿ ಪಡೆಯುವುದು ಕಡ್ಡಾಯ ಎಂದು ಸಿಪಿಐ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net