ಬೆಳ್ಳಿಹಾಳ ಸರ್ಕಾರಿ ಶಾಲೆ ಸ್ಥಳಾಂತರ

Mudagal school shift
ಮುದಗಲ್ ಸಮೀಪದ ಬೆಳ್ಳಿಹಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ಸತ್ಯಮ್ಮ, ಉಪ ತಹಸೀಲ್ದಾರ್ ತುಳಜಾರಾಮ್‌ಸಿಂಗ್ ಭೇಟಿ ನೀಡಿ ಪರಿಶೀಲಿಸಿದರು.
Published on

ಮುದಗಲ್: ಪಟ್ಟಣದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಭಾರತ್ ಮಾಲಾ ರಾಷ್ಟ್ರೀಯ ಹೆದ್ದಾರಿಗೆ ಬೆಳ್ಳಿಹಾಳ ಗ್ರಾಮದ ಸರ್ಕಾರಿ ಶಾಲೆ ಕಟ್ಟಡ ತೆರವುಗೊಳಿಸಬೇಕಿರುವುದರಿಂದ ಪರ್ಯಾಯ ಜಾಗ ಕಲ್ಪಿಸಲು ಲಿಂಗಸುಗೂರು ಸಹಾಯಕ ಆಯುಕ್ತ ಬಸವಣೆಪ್ಪ ಕಲಶೆಟ್ಟಿ, ತಹಸೀಲ್ದಾರ್ ಸತ್ಯಮ್ಮ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.

ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡವಿದೆ. ಈಗ ರಾಷ್ಟ್ರೀಯ ಹೆದ್ದಾರಿಗೆ ಸ್ಥಳದ ಅವಶ್ಯಕತೆ ಇದ್ದು ಶಾಲೆ ಸ್ಥಳಾಂತರ ಅನಿವಾರ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಸರ್ಕಾರಿ ಜಾಗ ಲಭ್ಯವಿದ್ದು, ಅದರಲ್ಲಿ 2ಎಕರೆ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ಎಸಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net